ಮಂಡ್ಯ: ಪೊಲೀಸ್ ಜೀಪ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಮಂಡ್ಯದ ಮದ್ದೂರಿನಲ್ಲಿ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಮಧು(28) ಸಾವನ್ನಪ್ಪಿದ ಸವಾರ. ಯುವಕ ತನ್ನ ಸ್ಕೂಟರಿನಲ್ಲಿ ರಸ್ತೆ ದಾಟಲು ಹೋಗುತ್ತಾನೆ. ಈ ವೇಳೆ ವೇಗವಾಗಿ ಬಂದ ಪೊಲೀಸ್ ಜೀಪ್ ಸ್ಕೂಟರ್ ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಪೊಲೀಸ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮಧು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮದ್ದೂರಿನ ಎಲ್‍ಐಸಿ ಆಫೀಸ್ ಮುಂಭಾಗ ನಡೆದ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸದ್ಯ ಈ ಬಗ್ಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


