ಬೆಂಗಳೂರು: ವ್ಯಕ್ತಿಯೊಬ್ಬ ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಚಾಕು ಇರಿದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ನಗರದ ಅಂಬೇಡ್ಕರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ಈ ಘಟನೆ ನಡೆದಿದೆ. ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ತೇಜಸ್ ಶರ್ಮಾ ಎಂಬ ವ್ಯಕ್ತಿ ಏಕಾಏಕಿ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಅವರ ಮೇಲೆ ದಾಳಿ ಮಾಡಿ ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಆರೋಪಿಯನ್ನ ವಿಧಾನ ಸೌಧ ಪೊಲೀಸರು ಬಂಧಿಸಿದ್ದಾರೆ.ಹಲ್ಲೆಗೊಳಗಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿಶ್ವನಾಥ್ ಶೆಟ್ಟಿ ಅವರನ್ನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.Sign in to your account
Username or Email Address


Password

 Remember Me


