ಗದಗ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ಕುತ್ತಿಗೆ ಕೊಯ್ದುಕೊಂಡು ರೈಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗದಗ ತಾಲೂಕಿನ ತಿರ್ಲಾಪೂರ ರೈಲು ನಿಲ್ದಾಣದ ಬಳಿ ನೆಡೆದಿದೆ.ಜಾರ್ಖಂಡ್ ಮೂಲದ ಶಿವು(24) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಶಿವು ಗಿನಗೇರಾ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಇವನು ಹುಬ್ಬಳ್ಳಿಯಿಂದ ಅಮರಾವತಿ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗುತ್ತಿದೆ.ಅರೆ ಜೀವದಲ್ಲಿ ಒದ್ದಾಡುತ್ತಿದ್ದ ಯುವಕನನ್ನು ಗದಗ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


