ಬೆಂಗಳೂರು: ಕಾಂಗ್ರೆಸ್‌ನಲ್ಲಿ (Congress) ಎಲ್ಲವೂ ಸರಿಯಿಲ್ಲ. ಬೆಳಗ್ಗೆ ಎದ್ದರೆ ನಾಯಿ-ನರಿಗಳಂತೆ ಕಚ್ಚಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (B.S.Yeiyurappa) ಟೀಕಿಸಿದರು.ಬಿಜೆಪಿ (BJP) ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಆರು ತಿಂಗಳಾದರೂ ಮುಂದೆ ಹೋಗ್ತಿಲ್ಲ. ಸರ್ಕಾರದ ಚಕ್ರಗಳಲ್ಲಿ ಗಾಳಿ ಇಲ್ಲ, ಮುಂದೆ ಹೋಗ್ತಿಲ್ಲ. ಸಿದ್ದರಾಮಯ್ಯಗೆ ಸರ್ಕಾರದ ಮೇಲೆ ಹಿಡಿತ ಇಲ್ಲ. ಸಿದ್ದರಾಮಯ್ಯ ವಿಚಿತ್ರ ಪರಿಸ್ಥಿತಿಯಲ್ಲಿ ಇದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸಿದ್ದು-ಡಿಕೆ ಇಬ್ಬರೇ ನಿರ್ಧಾರ ಮಾಡೋದು ಬೇಡ, ಸಮಿತಿ ರಚಿಸಿ; ಹಿರಿಯ ಪ್ರಭಾವಿ ನಾಯಕರು ಬಿಗಿ ಪಟ್ಟುರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ ಆಗಿದೆ. ಉಚಿತ ವಿದ್ಯುತ್ ಕೊಡ್ತೀವಿ ಅಂತ ಹೇಳಿ ವಿದ್ಯುತ್ ದರ ಹೆಚ್ಚಿಸಿದ್ದಾರೆ. ಬರ ಪೀಡಿತ ಪ್ರದೇಶಗಳಿಗೆ ಸಿಎಂ, ಸಚಿವರು ಹೋಗಿಲ್ಲ. ಶಾಸಕರಿಗೆ ಕೇವಲ 50 ಲಕ್ಷ ರೂ. ಅನುದಾನ ಘೋಷಣೆ ಮಾಡಿದ್ದಾರೆ. ಎಸ್ಸಿ, ಎಸ್ಟಿ ನಿಗಮಗಳಿಗೆ ಹಣ ಕೊಟ್ಟಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕದ ಖರ್ಚು ರೈತನೇ ಭರಿಸಬೇಕು ಎಂಬ ಆದೇಶ ಹೊರಡಿಸಲು ಸರ್ಕಾರ ಹೊರಟಿದೆ. ಉಚಿತ ಬಸ್ ಹೊರತು ಬೇರೆ ಗ್ಯಾರಂಟಿ ಕೊಟ್ಟಿಲ್ಲ. ಅರ್ಧದಷ್ಟು ಮಹಿಳೆಯರಿಗೆ ಗೃಹಲಕ್ಷ್ಮಿ ನಿಧಿ ಕೊಟ್ಟಿಲ್ಲ. ಇದು ಲೂಟಿ ಸರ್ಕಾರ, ಐಟಿ ದಾಳಿಯಿಂದ ಸರ್ಕಾರದ ಲೂಟಿ ಬಯಲಾಗಿದೆ. ಸಿದ್ದರಾಮಯ್ಯ- ಡಿಕೆಶಿ ಬಣಗಳ ನಡುವೆ ನಾಯಕತ್ವದ ಜಗ್ಗಾಟ ತಾರಕಕ್ಕೇರಿದೆ. ಮೊದಲಿಗಿಂತ ಹೆಚ್ಚು ವರ್ಗಾವಣೆ ದಂಧೆ ಮಿತಿಮೀರಿದೆ. ಡಿಸಿಎಂ ಕಟ್ಟಿ ಹಾಕಲು ಡಿನ್ನರ್ ಮೀಟಿಂಗ್ ಶುರುವಾಗಿದೆ ಎಂದು ಟೀಕಿಸಿದರು. ಇದನ್ನೂ ಓದಿ: ಬಜರಂಗ ಬಲಿ ಗದೆಯೇ ತಾಲಿಬಾನ್‍ಗಳಿಗೆ ಪರಿಹಾರ: ಯೋಗಿ ಆದಿತ್ಯನಾಥ್ಮಳೆ ಕೊರತೆ ಅರಿವಿದ್ದರೂ ಮುಂಜಾಗ್ರತಾ ಕ್ರಮ ವಹಿಸಲಿಲ್ಲ. ಭೀಕರ ಬರ ಪರಿಸ್ಥಿತಿ ಇದೆ. ಬರ ಪರಿಹಾರ ಕೊಡದೇ ಕೇಂದ್ರಕ್ಕೆ ಮೂದಲಿಸುವ ಕೆಲಸ ಮಾಡ್ತಿದ್ದಾರೆ. ಆಡಳಿತ ಯಂತ್ರ ಸರಿಪಡಿಸುವ ಬದಲು ವಿಪಕ್ಷಗಳ ಮೇಲೆ ಹರಿಹಾಯ್ತಿರೋದು ಪ್ರಜಾಪ್ರಭುತ್ವದ ಅಣಕ. ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ವಿರುದ್ಧ ಟೀಕೆ ಮಾಡ್ತಿದ್ದಾರೆ. ಕೇಂದ್ರ ಬರ ಪರಿಹಾರ ನಿಶ್ಚಿತವಾಗಿ ಕೊಡುತ್ತೆ. ಆದರೆ ಇವರು ಕೇಂದ್ರದ ಪರಿಹಾರಕ್ಕೆ ಕಾಯುತ್ತಿದ್ದಾರೆ. ಸಂಪನ್ಮೂಲಗಳ ಕೊರತೆಯಿಂದ ಎಲ್ಲದಕ್ಕೂ ಕೇಂದ್ರದ ಕಡೆ ನೋಡ್ತಿದ್ದಾರೆ. ಸುರ್ಜೇವಾಲಾ, ವೇಣುಗೋಪಾಲ ಕಲೆಕ್ಷನ್ ಟಾರ್ಗೆಟ್ ಕೊಡಲು ಭೇಟಿ ಕೊಟ್ಟಿದ್ದಾರೆ. ಇದು ಎಐಸಿಸಿಗೆ ಎಟಿಎಂ ಸರ್ಕಾರ ಆಗಿದೆ. ಮೋದಿಯವರನ್ನ ನಿತ್ಯ ಟೀಕಿಸೋದು ಸಿದ್ದರಾಮಯ್ಯ ಚಾಳಿಯಾಗಿದೆ ಎಂದು ಅಸಮಾಧಾನ ಹೊರಹಾಕಿದರು.ಕಳೆದ ಒಂಬತ್ತು ವರ್ಷಗಳಲ್ಲಿ ಎನ್‌ಡಿಆರ್‌ಎಫ್‌ನಡಿ 12,407 ಕೋಟಿ, ಎಸ್‌ಡಿಆರ್‌ಎಫ್‌ನಡಿ 3,377 ಕೋಟಿ ರೂ. ಹಣ ಕೇಂದ್ರ ಕೊಟ್ಟಿದೆ. ರಾಜ್ಯದಲ್ಲಿ 54 ಹೆದ್ದಾರಿ ಕಾಮಗಾರಿಗಳು ಚಾಲ್ತಿಯಲ್ಲಿವೆ. ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಮುಂದಿನ ಮಾರ್ಚ್‌ಗೆ ಸಿದ್ಧವಾಗಲಿದೆ. ಹೀಗೆ ಹಲವು ಕಾಮಗಾರಿಗಳು ಕೇಂದ್ರದಿಂದ ರಾಜ್ಯದಲ್ಲಿ ನಡೆಯುತ್ತಿವೆ ಎಂದು ತಿಳಿಸಿದರು. ಇದನ್ನೂ ಓದಿ: ಸರ್ಯು ನದಿಯಲ್ಲಿ ದೋಣಿ ಮುಳುಗಿ ಇಬ್ಬರ ದುರ್ಮರಣ, 7 ಮಂದಿ ನಾಪತ್ತೆಮೋದಿಯವರು ರಾಜ್ಯಕ್ಕೆ ತಾರತಮ್ಯ ಮಾಡುತ್ತಿಲ್ಲ. ಸಿದ್ದರಾಮಯ್ಯ ರಾಜಕೀಯ ಕಾರಣಕ್ಕಾಗಿ ಕೇಂದ್ರದ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಗರಂ ಆದರು. ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಅಶ್ವಥ್ ನಾರಾಯಣ್, ರವಿಸುಬ್ರಹ್ಮಣ್ಯ, ಎಸ್. ರಘು, ಉದಯ್ ಗರುಡಾಚಾರ್, ಮಾಜಿ ಸಚಿವ ಗೋವಿಂದ ಕಾರಜೋಳ, ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


