ಚಿತ್ರದುರ್ಗ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾದ (Accident) ಪರಿಣಾಮ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ಜನ ಗಂಭೀರವಾಗಿ ಗಾಯಗೊಂಡ ಘಟನೆ ಹಿರಿಯೂರಿನ ಕೆ.ಆರ್ ಹಳ್ಳಿಯ ಬಳಿ ನಡೆದಿದೆ.ಮೃತ ವ್ಯಕ್ತಿಯನ್ನು ಮಂಜಣ್ಣ (45) ಎಂದು ಗುರುತಿಸಲಾಗಿದ್ದು, ಇವರು ತುಮಕೂರು (Tumkur) ಮೂಲದ ಶಿರಾದವನು ಎನ್ನಲಾಗಿದೆ. ಅಡಿಕೆ ಕೊಯ್ಯುವ ಕೆಲಸಕ್ಕೆಂದು 9 ಜನ ಕಾರ್ಮಿಕರು ಟ್ರಾಕ್ಟರ್‌ನಲ್ಲಿ ಹಿರಿಯೂರಿಗೆ ಹೊರಟಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ಟ್ರ್ಯಾಕ್ಟರ್‌ನಲ್ಲಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಂಜಣ್ಣ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಅಲ್ಲದೇ ಉಳಿದ 8 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಬಜರಂಗ ಬಲಿ ಗದೆಯೇ ತಾಲಿಬಾನ್‍ಗಳಿಗೆ ಪರಿಹಾರ: ಯೋಗಿ ಆದಿತ್ಯನಾಥ್ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಲಾರಿ ಚಾಲಕನ ಮಿತಿ ಮೀರಿದ ವೇಗವೆ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಮ್ಮನನ್ನು ನಿಂದಿಸ್ತಿದ್ದ ಮಾವನನ್ನೇ ಕೊಂದ ಅಳಿಯ!Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


