ಬೆಂಗಳೂರು: ತರುಣ್ ಟಾಕೀಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸುತ್ತಿರುವ `ಪ್ರೊಡಕ್ಷನ್ ನಂ 3` ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ರಾಜಾಜಿನಗರದ ಮೋದಿ ಆಸ್ಪತ್ರೆ ಬಳಿಯಿರುವ ಗಣೇಶನ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಪ್ರಥಮ ಸನ್ನಿವೇಶಕ್ಕೆ ಮಾನಸ ತರುಣ್ ಆರಂಭ ಫಲಕ ತೋರಿದರು. ನಿದೇರ್ಶಕ ಹರಿ ಸಂತು ಅವರ ತಾಯಿ ಪ್ರೇಮ ಕ್ಯಾಮೆರಾ ಚಾಲನೆ ಮಾಡಿದರು.ಅಲೆಮಾರಿ ಸಂತು ಎಂದೆ ಖ್ಯಾತರಾಗಿರುವ, ಇತ್ತೀಚೆಗಷ್ಟೇ `ಕಾಲೇಜ್ ಕುಮಾರ` ಎಂಬ ಯಶಸ್ವಿ ಚಿತ್ರವನ್ನು ನಿರ್ದೇಶಿಸಿದ್ದ ಹರಿ ಸಂತು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ತರುಣ್ ಸುಧೀರ್ ಬರೆದಿದ್ದಾರೆ. ಗುರುಪ್ರಶಾಂತ್ ರೈ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ, ಕೆ.ಎಂ.ಪ್ರಕಾಶ್ ಸಂಕಲನ, ಭೂಷಣ್ ನೃತ್ಯ ನಿರ್ದೇಶನ ಹಾಗೂ ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ.ಈ ಚಿತ್ರಕ್ಕಾಗಿ ಕಲಾ ನಿರ್ದೇಶಕ ಮೋಹನ್ ಬಿ ಕೆರೆ ಅವರು ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಒಂದು ತಿಂಗಳಿನಿಂದ ಬೃಹತ್ ಮನೆ ಸೆಟ್ ನಿರ್ಮಾಣ ಮಾಡುತ್ತಿದ್ದಾರೆ.ಶರಣ್, ರವಿಶಂಕರ್, ಸಾಧುಕೋಕಿಲ, ತಬಲನಾಣಿ, ಪ್ರಶಾಂತ್ ಸಿದ್ದಿ, ಅರಸು, ಕಲ್ಯಾಣಿ, ಅರುಣ ಬಾಲರಾಜ್, ಸುಂದರ್, ನಾಜರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.Sign in to your account
Username or Email Address


Password

 Remember Me


