ಚಿಕ್ಕಬಳ್ಳಾಪುರ: ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಸ್ಥಿತಿಯಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೃತದೇಹ ಪತ್ತೆಯಾಗಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮುಲ್ಲಂಗಿಚೆಟ್ಲಪಲ್ಲಿ ಗ್ರಾಮದಲ್ಲಿ ನಡೆದಿದೆ.ರಮ್ಯಾ(14) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 8ನೇ ತರಗತಿಯ ವಿದ್ಯಾರ್ಥಿನಿ. ಭಾನುವಾರ ರಾತ್ರಿ ರಮ್ಯಾ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಈ ಘಟನೆಗೆ ಬಾಲಕಿಯ ಪಕ್ಕದ ಮನೆಯ ನಿವಾಸಿ 17 ವರ್ಷದ ಅಪ್ರಾಪ್ತ ಬಾಲಕ ಕಾರಣ ಅಂತ ಮೃತಳ ಸಂಬಂಧಿಕರು ದೂರಿದ್ದಾರೆ.ಅಪ್ರಾಪ್ತ ಬಾಲಕ ರಮ್ಯಾಗೆ ಲೈಂಗಿಕ ಕಿರುಕುಳ ನೀಡಿ ಆಕೆಯ ಮೇಲೆ ಅತ್ಯಾಚಾರ ಮಾಡಿ ನೇಣು ಬಿಗಿದಿದ್ದಾನೆ ಎಂದು ಮೃತಳ ಸಂಬಂಧಿಕರು ಆರೋಪಿಸಿದ್ದಾರೆ. ಆದರೆ ಆಕೆ ಆತ್ಮಹತ್ಯೆ ಮಾಡಿಕೊಂಡ ಮನೆಗೆ ಓಳಗಿನಿಂದಲೇ ಚಿಲಕ ಹಾಕಿದ್ದ ಕಾರಣ ಪೊಲೀಸರು ಇದು ಆತ್ಮಹತ್ಯೆ ಎಂದು ಮಾಹಿತಿ ನೀಡುತ್ತಿದ್ದಾರೆ.ರಮ್ಯಾ ಮೃತಪಟ್ಟ ನಂತರ ಅಪ್ರಾಪ್ತ ಬಾಲಕನನ್ನು ಮೃತಳ ಸಂಬಂಧಿಕರು ಗ್ರಾಮದಲ್ಲಿ ಕಟ್ಟಿ ಹಾಕಿ ಥಳಿಸಿದ್ದಾರೆ. ವಿಷಯ ತಿಳಿದ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.ಮೃತ ರಮ್ಯಾ ಹಾಗೂ ಬಾಲಕನ ನಡುವೆ ಪ್ರೇಮವಿದ್ದು, ಪ್ರೀತಿ-ಪ್ರೇಮದ ವೈಮನಸ್ಸಿನಿಂದ ರಮ್ಯಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿಲಾಗಿದೆ. ಈ ಸಂಬಂಧ ಮೃತನ ಸಂಬಂಧಿಕರು ಬಾಲಕನ ವಿರುದ್ದ ದೂರು ನೀಡಿದ್ದಾರೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕುರಿತು ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 Advertisement 




Sign in to your account
Username or Email Address


Password

 Remember Me


