ಕೋಲಾರ: ಬೈಕ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಓರ್ವ ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಳಬಾಗಿಲು ತಾಲೂಕಿನ ಹೆಬ್ಬಣಿ ಗ್ರಾಮದ ಬಳಿ ನಡೆದಿದೆ.ಚಿತ್ರದುರ್ಗ ಮೂಲದ ಮಹೇಶ್ (35) ಮೃತ ದುರ್ದೈವಿ. ಗಂಭೀರವಾಗಿ ಗಾಯಗೊಂಡವರನ್ನು ಸಮೀಪದ ಮುಳಬಾಗಿಲು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಬೈಕ್ ಇವರ ವಿರುದ್ಧ ದಿಕ್ಕಿಗೆ ಅಂದರೆ ಚೆನ್ನೈ ಕಡೆಗೆ ಇಬ್ಬರು ಒಂದೇ ಬೈಕಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಹೆಬ್ಬಣಿ ಗ್ರಾಮದ ಬಳಿ ಲಾರಿ ಬೈಕ್ ವೇಗವಾಗಿ ಬಂದು ಮುಖಾಮುಖಿ ಡಿಕ್ಕಿ ಹೊಡೆದಿವೆ.ಡಿಕ್ಕಿ ಹೊಡೆದ ರಭಸಕ್ಕೆ ಬೈಕಿನಲ್ಲಿದ್ದ ಒಬ್ಬ ಲಾರಿ ಕೆಳಗೆ ಸಿಲುಕಿ ಮೃತಪಟ್ಟರೆ, ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಬಗ್ಗೆ ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕ ಮತ್ತು ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.Sign in to your account
Username or Email Address


Password

 Remember Me


