ವಿಜಯಪುರ: ರಾಜ್ಯ ಸರ್ಕಾರದ ಸಾಧನೆ ತಿಳಿಸುವ ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ವಿಜಯಪುರದ ಬಬಲೇಶ್ವರದಲ್ಲಿ ನಡೆದಿದೆ.ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಮತಕ್ಷೇತ್ರ ಬಬಲೇಶ್ವರದಲ್ಲಿ ನೀರಾವರಿ ಯೋಜನೆಗಳ ಬಗ್ಗೆ ಮಾಹಿತಿ ಬಿತ್ತರಿಸುತ್ತಿದ್ದ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದು, ಇಬ್ಬರು ಬಾಲಕರಿಗೆ ಸಣ್ಣ ಪುಟ್ಟ ಗಾಯಾಗಳಾಗಿವೆ. ಕೂಡಲೇ ಗಾಯಗೊಂಡ ಬಾಲಕರನ್ನು ವಿಜಯಪುರದ ಬಿಎಲ್‍ಡಿಇ ಆಸ್ಪತ್ರೆಗೆ ದಾಖಲಿಸಲಾಗಿದೆ.ಬೃಹತ್ ಎಲ್‍ಇಡಿ ಮೂಲಕ ದೃಶ್ಯಾವಳಿ ಮೂಡಿಸುತ್ತಿದ್ದ ಅತ್ಯಾಧುನಿಕ ವಾಹನ ಸಂಪೂರ್ಣ ಭಸ್ಮವಾಗಿದ್ದು, ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ. ಸ್ಥಳಕ್ಕೆ ಬಬಲೇಶ್ವರ ಪೊಲೀಸ್ ಠಾಣೆ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.ವಾಹನದ ಮಾಲೀಕರು ಈ ಸಂಬಂಧ ಪ್ರಕರಣ ದಾಖಲಿಸಲು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ಅನಾಹುತಕ್ಕೆ ಕಾರಣ ತಿಳಿದುಬಂದಿಲ್ಲ. Sign in to your account
Username or Email Address


Password

 Remember Me


