ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ಮಾಡಿ ಸದ್ಯ ಜೈಲು ಸೇರಿರೋ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ತನ್ನ ತಂದೆ ಹ್ಯಾರಿಸ್ ಅವರಿಗೆ ಕರೆ ಮಾಡಿ ಕ್ಲಾಸ್ ತೆಗೆದುಕೊಂಡಿದ್ದಾನೆ ಎಂಬುದಾಗಿ ಪರಪ್ಪನ ಅಗ್ರಹಾರದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಇಂದು ರೌಡಿ ನಲಪಾಡ್ ಭವಿಷ್ಯ- ಜಾಮೀನು ಅರ್ಜಿ ಕುರಿತು ಆದೇಶಪ್ರಕರಣ ಸಂಬಂಧ ಈಗಾಗಲೇ ಜಾಮೀನು ಅರ್ಜಿ ವಿಚಾರವಾಗಿ ಜೈಲಿನಲ್ಲಿ ಫುಲ್ ಟೆನ್ಷನ್ ಆಗಿರುವ ನಲಪಾಡ್, ಜಾಮಿನು ಕೊಡಿಸಲು ನಿನ್ನಿಂದ ಆಗುತ್ತಾ ಇಲ್ವಾ ಹೇಳು ಎಂದು ತಂದೆಗೆ ಆವಾಜ್ ಹಾಕಿದ್ದಾನೆ. ಒಂದು ವೇಳೆ ಜಾಮೀನು ಕೊಡಿಸಲು ಆಗದಿದ್ದರೆ ಹೊರಗಡೆ ನನ್ನ ಹುಡುಗರಿದ್ದಾರೆ. ಅವರಿಂದ ನಾನು ಜಾಮೀನು ತರಿಸಿಕೊಳ್ಳುತ್ತೇನೆ ಎಂದು ತಂದೆಯನ್ನು ತರಾಟೆಗೆ ತಗೊಂಡಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆಜೈಲಿಗೆ ಬಂದು ಇಷ್ಟು ದಿನ ಆಯ್ತು. ಒಂದು ದಿನವೂ ಕೂಡ ನನ್ನನ್ನು ನೋಡಲು ಬಂದಿಲ್ಲ. ನಾನು ಜೈಲಿನಿಂದ ಹೊರ ಬಂದ ಮೇಲೆ ನಿಂಗೆ ಇದೆ ನೋಡು. ಇವತ್ತು ಜೈಲಿಗೆ ಬಂದು ನನ್ನ ನೋಡ್ಲೆ ಬೇಕು ಎಂದು ತನ್ನ ತಂದೆಯೊಂದಿಗೆ ಉರ್ದು ಭಾಷೆಯಲ್ಲಿ ಹೇಳಿ ಹಠ ಹಿಡಿದಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮೈಮೇಲೆ ಕುರ್ಚಿಗಳನ್ನು ಎಸೆದ್ರು, sorry ಎಂದರೂ ಬಿಯರ್ ಬಾಟಲಿಯಿಂದ ಬಾಯಿಗೆ ಹೊಡೆದ್ರು- ನಲಪಾಡ್ ದಾಳಿ ಬಗ್ಗೆ ವಿದ್ವತ್ Exclusive ಮಾತುhttps://www.youtube.com/watch?v=oHsWb25A2VM 






 Advertisement 




Sign in to your account
Username or Email Address


Password

 Remember Me


