ರಾಯಚೂರು: ಜಿಲ್ಲೆಯ ಲಿಂಗಸುಗೂರು ಹಾಗೂ ರಾಯಚೂರು ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಲ್ಲಿ ಅಸಮಾಧಾನ ಉಂಟಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಸಿಟಿ ರವಿ ಹಾಗೂ ಸೋಮಣ್ಣ ಸಂಧಾನ ಸಭೆ ನಡೆಸಿದರು.ರಾಯಚೂರಿನ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿ ಬಳಿಕ ಮಾತನಾಡಿದ ಸಿ.ಟಿ.ರವಿ, ಲಿಂಗಸುಗೂರು ಮತ್ತು ರಾಯಚೂರು ನಗರ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಅಂತಿಮವಾಗಿಲ್ಲ ಎಂದು ತಿಳಿಸಿದರು.ಈ ವೇಳೆ ಮಾಧ್ಯಮಗಳು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಿಂದೆ ಡಾ. ಶಿವರಾಜ್ ಪಾಟೀಲ್ ಮತ್ತು ಮಾನಪ್ಪ ವಜ್ಜಲ್ ಹೆಸರು ಘೊಷಿಸಿದ್ದಾರಲ್ಲ ಎಂದು ಮರು ಪ್ರಶ್ನೆ ಹಾಕಿದ್ದಕ್ಕೆ ಸಿಟಿ ರವಿ, ನಾನು ಯಡಿಯೂರಪ್ಪ ಅವರ ಹೇಳಿಕೆಯನ್ನು ವಿರೋಧಿಸುವಿಲ್ಲ. ಅವರು ನಮ್ಮ ಪಕ್ಷದ ಮುಖವಾಣಿ. ಟಿಕೆಟ್ ಯಾರಿಗೆ ನೀಡಬೇಕು ಎನ್ನುವುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಸ್ಪಷ್ಟ ಪಡಿಸಿದರು.ಪಾರ್ಲಿಮೆಂಟರಿ ಬೋರ್ಡ್ ಅಭ್ಯರ್ಥಿಗಳನ್ನ ಅಂತಿಮಗೊಳಿಸಲಿದೆ ಅಂತ ಅತೃಪ್ತ 12 ಜನ ಆಕಾಂಕ್ಷಿಗಳ ಜೊತೆ ಸಭೆ ಮಾಡಿದ ಬಳಿಕ ಸಿಟಿ ರವಿ ಹೇಳಿದರು.Sign in to your account
Username or Email Address


Password

 Remember Me


