ಬೆಂಗಳೂರು: ನಗರದ ಕೆಂಗೇರಿಯ ಫ್ಲೈಓವರ್ ಬಳಿ ಅಪರಿಚಿತ ಯುವಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.ಫ್ಲೈಓವರ್ ಬಳಿಯ  ರೈಲ್ವೇ ಬ್ರಿಡ್ಜ್ ನ ಕಂಬಿಯೊಂದಕ್ಕೆ ನೇಣು ಬಿಗಿದುಕೊಂಡು ಯುವಕ ಸಾವನ್ನಪ್ಪಿದ್ದಾನೆ. ಈತನಿಗೆ ಸುಮಾರು 25 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ.ಯುವಕನ ಗುರುತು ಪತ್ತೆಯಾಗಿಲ್ಲ. ಅಲ್ಲದೇ ಯುವಕನ ಆತ್ಮಹತ್ಯೆಗೆ ನಿಖರ ಕಾರಣವೂ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಘಟನೆ ಸಂಬಂಧ ಕೆಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸ್ಥಳಕ್ಕೆ ಕೆಂಗೇರಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.






 Advertisement 




Sign in to your account
Username or Email Address


Password

 Remember Me


