ಹಾಸನ: ಬೆಂಗಳೂರಿನ ಕಾಲೇಜು ವಿದ್ಯಾರ್ಥಿಯನ್ನು (Student) ಅಪರಿಚಿತರು ಕಿಡ್ನ್ಯಾಪ್ (Kidnap) ಮಾಡಿ ಹಾಸನದಲ್ಲಿ (Hassan) ಬಿಟ್ಟು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.ಬೆಂಗಳೂರಿನ (Bengaluru) ಅನಂತಪುರದ ಕೃಷ್ಣೇಗೌಡ ಎಂಬವರ ಪುತ್ರ ಚಿರಾಗ್ (17) ಖಾಸಗಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಆತನನ್ನು ಅಪಹರಣ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ನಿನ್ನೆ (ಮಂಗಳವಾರ) ಬೆಳಗ್ಗೆ ಯುವಕ ಕಾಲೇಜಿಗೆ ಹೋಗುತ್ತಿದ್ದ ವೇಳೆ ಏಕಾಏಕಿ ಎದುರಾದ ಕೆಲ ಅಪರಿಚಿತರು ವಿಳಾಸ ಕೇಳುವ ನೆಪದಲ್ಲಿ ವಿದ್ಯಾರ್ಥಿಯ ಪ್ರಜ್ಞೆ ತಪ್ಪಿಸಿ ನಂತರ ಅಪಹರಿಸಿದ್ದಾರೆ ಎಂದು ಚಿರಾಗ್ ತಿಳಿಸಿದ್ದಾನೆ.ಚಿರಾಗ್ ಎಂದಿನಂತೆ ಬೆಳಗ್ಗೆ ಕಾಲೇಜಿಗೆ ಹೋಗುತ್ತಿದ್ದಾಗ ಈ ಕೃತ್ಯ ನಡೆದಿದೆ. ಪ್ರಜ್ಞಾಹೀನ ಸ್ಥಿತಿಯಲ್ಲೇ ಕಾರು ಹತ್ತಿದ್ದ ಹುಡುಗ ಎಚ್ಚರಗೊಂಡಾಗ ಅರಕಲಗೂಡು ಸಮೀಪ ಇರುವುದು ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ಹಾಸನಕ್ಕೆ ಬಂದ ದುಷ್ಕರ್ಮಿಗಳು, ವಿದ್ಯಾರ್ಥಿಯನ್ನು ಅರಕಲಗೂಡು ಸಮೀಪ ಬಿಟ್ಟು ಹೋಗಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ-ಬೆಂಗಳೂರು ವಿಮಾನದಲ್ಲಿ ತಾಂತ್ರಿಕ ದೋಷ; ವಿಮಾನ ಹಾರಾಟ ರದ್ದುಚಿರಾಗ್ ಎಚ್ಚರಗೊಂಡ ನಂತರ ಸಮೀಪದ ಮನೆಯೊಂದರ ಬಳಿ ತೆರಳಿ ತನ್ನ ಪೋಷಕರಿಗೆ ಫೋನ್ ಮಾಡಿದ್ದಾನೆ. ಕೂಡಲೇ ಹಾಸನಕ್ಕೆ ಬಂದ ಪೋಷಕರು, ಮಗನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗೆ ಹಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಅಪಹರಣ ಮಾಡಿದ್ದು ಯಾರು? ಯಾವ ಕಾರಣಕ್ಕೆ ಮಾಡಿದರು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ನಡೆಸುವಂತೆ ಪೋಷಕರು ಒತ್ತಾಯಿಸಿದ್ದಾರೆ. ಈ ಸಂಬಂಧ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಹೆಸರಾಂತ ಯುವ ಸಂಗೀತ ಸಂಯೋಜಕ ಮನೋಜ್ ವಸಿಷ್ಠ ನಿಧನWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


