ಕಾರವಾರ: ಬೈಕ್ ಗೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ 2 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಿಣಗಾದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.ಮೃತರನ್ನು ಉತ್ತರ ಪ್ರದೇಶ ಮೂಲದ ಅಮಿತ್ ಕೌಶಲ್ (31), ಪತ್ನಿ ಜ್ಯೋತಿ ಗುಪ್ತಾ (25) ಹಾಗೂ ದಂಪತಿಯ 2 ವರ್ಷದ ಗಂಡು ಮಗು ಎಂದು ಗುರುತಿಸಲಾಗಿದೆ.ಅಮಿತ್ ಕೌಶಲ್ ಕದಂಬ ನೌಖಾ ನೆಲೆಯ ಉದ್ಯೋಗಿಯಾಗಿದ್ದು, ಇಂದು ಬಿಣಗಾದಿಂದ ಕಾರವಾರ ಕಡೆ ಬೈಕ್ ನಲ್ಲಿ ಬರುತ್ತಿರುವಾಗ ವೇಳೆ ಕಾರವಾರ ದಿಂದ ಅಂಕೋಲ ಕಡೆ ಹೋಗುತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ.ಟಿಪ್ಪರ್ ಚಾಲಕನ ಅಜಾಗರೂಕತೆಯ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಅಪಘಾತದಲ್ಲಿ ಇಡೀ ಕುಟುಂಬ ಸಾವನ್ನಪ್ಪಿದೆ. ಈ ಘಟನೆ ಸಂಬಂಧ ಕಾರವಾರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. Sign in to your account
Username or Email Address


Password

 Remember Me


