ಕೋಲಾರ: ಖಾಸಗಿ ಆಸ್ಪತ್ರೆಯ ಜನರೇಟರ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಯಲ್ಲಿದ್ದ ರೋಗಿಗಳು ಕೆಲಕಾಲ ಕಂಗಾಲಾಗಿ ಹೊರ ಬಂದ ಘಟನೆ ನಗರದಲ್ಲಿಂದು ನಡೆದಿದೆ.ನಗರದ ಗೌರಿಪೇಟೆಯಲ್ಲಿರುವ ಗಣೇಶ್ ಹೆಲ್ತ್ ಕೇರ್ ಖಾಸಗಿ ಆಸ್ಪತ್ರೆಯಲ್ಲಿ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೊದಲಿಗೆ ಆಸ್ಪತ್ರೆಯ ಜನರೇಟರ್ ರೂಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ರಭಸಕ್ಕೆ ಆಸ್ಪತ್ರೆಯ ರೋಗಿಗಳ ವಾರ್ಡ್ ಗೆ ಬೆಂಕಿ ಆವರಿಸಿದ್ದರಿಂದ ರೂಮ್ ತುಂಬೆಲ್ಲಾ ದಟ್ಟ ಹೊಗೆ ಆವರಿಸಿತ್ತು.ದಟ್ಟವಾದ ಹೊಗೆ ಕಂಡ ರೋಗಿಗಳಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದ್ರೆ ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ. ವಿಷಯ ತಿಳಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದ್ರು. ಸ್ಥಳಕ್ಕೆ ಕೋಲಾರ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Sign in to your account
Username or Email Address


Password

 Remember Me


