ಬೆಂಗಳೂರು: ಸಮುದಾಯ ಭವನದಲ್ಲಿ ಅಡುಗೆ ಮಾಡುವ ಬಾಯ್ಲರ್ ಸ್ಫೋಟಗೊಂಡ ಘಟನೆ ಸಂಭವಿಸಿದೆ.ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಸಮುದಾಯ ಭವನದಲ್ಲಿ ಈ ಘಟನೆ ನಡೆದಿದೆ. ಕೆಲಸ ಮಾಡುವವರು ಅಡುಗೆ ಮಾಡಿಕೊಳ್ಳುತ್ತಿದ್ದಾಗ ಬಾಯ್ಲರ್ ಸ್ಫೋಟಗೊಂಡಿದೆ ಎನ್ನಲಾಗಿದೆ.ಭವನದಲ್ಲಿ ಯಾವುದೇ ಕಾರ್ಯಕ್ರಮಗಳು ಇಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.Sign in to your account
Username or Email Address


Password

 Remember Me


