ಧಾರವಾಡ: ಆಕಸ್ಮಿಕ ಬೆಂಕಿ ಅನಾಹುತಕ್ಕೆ ಬಾಲಕ ಬಲಿಯಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲುಕಿನ ಕುರುವಿನಕೊಪ್ಪ ಗ್ರಾಮದಲ್ಲಿ ನಡೆದಿದೆ.7 ವರ್ಷದ ಬಾಲಕ ಚಂದನ ಸಂಗೊಳ್ಳಿ ಮೃತ ದುರ್ದೈವಿ. ದ್ಯಾಮಣ್ಣ ಕೊಂಕಣ್ಣವರ ಅವರಿಗೆ ಸೇರಿದ ಬಣವೆಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಬಣವೆಯ ಬಳಿ ಆಟವಾಡುತ್ತಿದ್ದ ಬಾಲಕ ಚಂದನ ಸಂಗೊಳ್ಳಿ ಬೆಂಕಿಗೆ ಆಹುತಿಯಾಗಿದ್ದಾನೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.ಕಲಘಟಗಿ ಪೊಲೀಸರು ಬಣವೆಗೆ ಬೆಂಕಿ ಹೊತ್ತಿಕೊಂಡ ಬಗ್ಗೆ ಮಹಿತಿ ಕಲೆ ಹಾಕುತ್ತಿದ್ದಾರೆ.Sign in to your account
Username or Email Address


Password

 Remember Me


