ಬೀದರ್: ರೇಡಿಯಂ ಅಂಗಡಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ, ಲಕ್ಷಾಂತರ ರೂ. ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ಟೂರಿಸ್ಟ ಲಾಡ್ಜ್ ಬಳಿ ಬುಧವಾರ ರಾತ್ರಿ ನಡೆದಿದೆ.ಮಸ್ತಾನ್ ಆರ್ಟ್ಸ್ ಎನ್ನುವ ಅಂಗಡಿಗೆ ಬೆಂಕಿ ತಗುಲಿದ್ದು, ಅಂಗಡಿಯಲ್ಲಿದ್ದ ಕಂಪ್ಯೂಟರ್ ಹಾಗೂ ಇತರೆ ಯಂತ್ರಗಳು ಸೇರಿದಂತೆ ಎಲ್ಲಾ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ.ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅವಘಡದಿಂದ ಸುಮಾರು 4 ಲಕ್ಷ ರೂಪಾಯಿಗೂ ಅಧಿಕ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.Sign in to your account
Username or Email Address


Password

 Remember Me


