ಮಂಗಳೂರು: ಪ್ರೇಮ ವೈಫಲ್ಯದ ಹಿನ್ನಲೆಯಲ್ಲಿ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಯನ್ನು ನಡುಬೀದಿಯಲ್ಲೇ ಚೂರಿ ಇರಿದು ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.ನೆಹರು ಮೆಮೊರಿಯಲ್ ಕಾಲೇಜಿನ ಬಿಎಸ್‍ಸಿ ವಿದ್ಯಾರ್ಥಿನಿ ಅಕ್ಷತಾಳನ್ನು ಅದೇ ಕಾಲೇಜಿನಲ್ಲಿ ಓದುತ್ತಿದ್ದ ಕಾರ್ತಿಕ್ ಸುಳ್ಯದ ರಥಬೀದಿಯಲ್ಲಿ ಆರು ಬಾರಿ ಚೂರಿಯಿದ ಇರಿದು ಕೊಲೆ ಮಾಡಿದ್ದಾನೆ.ಕಾರ್ತಿಕ್ ಹಲವು ಬಾರಿ ಅಕ್ಷತಾ ಜೊತೆ ತನ್ನ ಪ್ರೀತಿಯನ್ನು ಹೇಳಿಕೊಂಡಿದ್ದು ಆಕೆ ನಿರಾಕರಿಸಿದ್ದಳು. ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ರಥಬೀದಿಯಲ್ಲಿ ಆಕೆಗೆ ಚೂರಿಯಿಂದ ಇರಿದಿದ್ದಾನೆ. ಆಕೆಯನ್ನು ಕೊಲೆ ಮಾಡಿದ ಬಳಿಕ ತಾನೂ ಆದೇ ಚೂರಿಯಿಂದ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಈ ದೃಶ್ಯವನ್ನು ನೋಡಿದ ಸ್ಥಳೀಯರು ಕೂಡಲೇ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  Sign in to your account
Username or Email Address


Password

 Remember Me


