ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಹೂಡಿದ್ದಾರೆ. ಇದು ಬೆಳಗ್ಗೆ 8.15ಕ್ಕೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಮಿತ್ ಶಾ ವಿಶೇಷ ಪೂಜೆ ಸಲ್ಲಿಸಿದ್ದಾರೆ.102 ಡಿಗ್ರಿ ಜ್ವರದಿಂದ ಬಳಲುತ್ತಿರುವ ಅಮಿತ್ ಶಾ ಆದಿಶೇಷ ವಸತಿಗೃಹಲ್ಲಿ ಆರೋಗ್ಯ ತಪಾಸಣೆ ಮಾಡಿಸಿದ್ದಾರೆ. ಇಂದಿನ ಕಾರ್ಯಕ್ರಮಗಳಲ್ಲಿ ಕುಳಿತು ಮಾತನಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.ಬೆಳಗ್ಗೆ 8.15ಕ್ಕೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ  9.30ಕ್ಕೆ ಸುಬ್ರಹ್ಮಣ್ಯದ ನವಶಕ್ತಿ ಸಮಾವೇಶ ಮತ್ತು ಆಯ್ದ ಕಾರ್ಯಕರ್ತರ ಜೊತೆ ಸಮಾಲೋಚನೆಯಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. 10 ಗಂಟೆಗೆ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಬಂಟ್ವಾಳದಲ್ಲಿ ನವಶಕ್ತಿ ಸಮಾವೇಶ ನಡೆಯಲಿದೆ.ಮಧ್ಯಾಹ್ನ 2.30ಕ್ಕೆ ಅಮಿತ್ ಶಾ ಸುರತ್ಕಲ್‍ನ ಕಾಟಿಪಳ್ಳದಲ್ಲಿ ದೀಪಕ್ ರಾವ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸುರತ್ಕಲ್‍ನ ಖಾಸಗಿ ಹೊಟೇಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಂತರ ಸಂಜೆ ನಾಲ್ಕು ಗಂಟೆ ಹೊತ್ತಿಗೆ ಮಂಗಳೂರಿನಿಂದ ಅಮಿತ್ ಶಾ ನಿರ್ಗಮಿಸಲಿದ್ದಾರೆ. ಇದನ್ನೂ ಓದಿ: ಕರಾವಳಿಯಲ್ಲಿ ನಾಲ್ಕು ದಿನ ಅಮಿತ್ ಶಾ ಟೂರ್- ಬಿಜೆಪಿಯಲ್ಲಿ ಮಿಂಚಿನ ಸಂಚಲನSign in to your account
Username or Email Address


Password

 Remember Me


