ಧಾರವಾಡ: ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ಮರಾಠಾ ಸಮಾಜದ ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.ನಗರದ ಮರಾಠಾ ಕಾಲೋನಿಯ ಶಿವಾಜಿ ಪುತ್ಥಳಿ ಬಳಿ ನಡೆದ ಕಾರ್ಯಕ್ರಮದಲ್ಲಿ ಮಂಜುನಾಥ ಕದಂ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಮರಾಠಾ ಸಮಾಜದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ನಾಮನಿರ್ದೇಶಿತ ಪಾಲಿಕೆ ಸದಸ್ಯರಾಗಿರುವ ಮಂಜುನಾಥ್ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ತಮ್ಮ ರಿವಾಲ್ವರ್ ನಿಂದ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.ಈ ವೇಳೆ ಪಾಲಿಕೆ ಸದಸ್ಯರಾದ ರಾಜು ಅಂಬೋರೆ ಹಾಗೂ ಅಲ್ತಾಫ್ ಕಿತ್ತೂರ ಕೂಡಾ ಸ್ಥಳದಲ್ಲಿ ಉಪಸ್ಥಿತರಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ಪೊಲೀಸ್ ಆಯುಕ್ತರಿಗೆ ಮಾಧ್ಯಮಗಳು ಪ್ರಶ್ನಿಸಿದರೆ, ಮರಾಠಾ ಮಂಡಳಿಯವರು ಪ್ರತಿ ವರ್ಷ ಶಿವಾಜಿ ಜಯಂತಿಗೆ ಈ ರೀತಿ ಆಚರಣೆ ಮಾಡುತ್ತಾ ಬಂದಿದ್ದಾರೆ. ಅದೇ ರೀತಿ ಅವರು ಇಂದು ಕೂಡಾ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಉತ್ತರಿಸಿದ್ದಾರೆ.Sign in to your account
Username or Email Address


Password

 Remember Me


