ಬೆಂಗಳೂರು: ನಗರದ ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ಶಾಂತಿನಗರ ಶಾಸಕ ಹ್ಯಾರೀಸ್ ಪುತ್ರ ನಲ್ಪಾಡ್ ಅಂಡ್ ಟೀಮ್ ಕುಡಿದು ವಿದ್ವತ್ ಎಂಬ ಯುವಕ ಮೇಲೆ ಮಾರಣಾಂತಿಕ ಹಲ್ಲೆ ನಡೆದು 24 ಗಂಟೆ ಕಳೆದಿದೆ. ಆದರೂ ಎ1 ಆರೋಪಿ ನಲಪಾಡ್ ನಾಪತ್ತೆಯಾಗಿದ್ದಾನೆ.ಪೊಲೀಸರು ಎಷ್ಟೇ ಹುಡುಕಿದರೂ ಪತ್ತೆಯಾಗಿಲ್ಲ. ಇತ್ತ ಪ್ರಕರಣವನ್ನು ಸಿಸಿಬಿಗೆ ವರ್ಗಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಆದೇಶಿಸಿದ್ದು, ಸಿಸಿಬಿ ಪೋಲಿಸ್ರು ನಲಪಾಡ್‍ಗೆ ಬಲೆ ಬೀಸಿದ್ದಾರೆ. ಕಾಸರಗೋಡು ರೆಸಾರ್ಟ್ ಸೇರಿದಂತೆ ಹಲವು ಕಡೆ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹ್ಯಾರಿಸ್ ಪುತ್ರನಿಂದ ಯುವಕನ ಮೇಲೆ ಹಲ್ಲೆ ಪ್ರಕರಣ- ಆರೋಪಿಗಳನ್ನು ಬಂಧಿಸದಿದ್ದರೆ ಪೊಲೀಸರೇ ನೇರ ಹೊಣೆ: ರಾಮಲಿಂಗಾ ರೆಡ್ಡಿಪ್ರಕರಣಕ್ಕೆ ಸಂಬಂಧಿಸಿದಂತೆ ನಲಪಾಡ್‍ನ ಆರು ಮಂದಿ ಸಹಚರರನ್ನು ಸಿಸಿಬಿಗೆ ಒಪ್ಪಿಸಿದ್ದು, ಸಿಸಿಬಿ ಪೊಲೀಸರು ಪ್ರಾಥಮಿಕ ಮಾಹಿತಿ ಕಲೆಹಾಕುತ್ತಿದ್ದಾರೆ. ಪೊಲೀಸರೇ ಬಂದು ನಲಪಾಡ್‍ನನ್ನು ಅರೆಸ್ಟ್ ಮಾಡಿದ್ರೆ ಜಾಮೀನು ಸಿಗಲ್ಲ. ಹೀಗಾಗಿ ಜಾಮೀನಿಗೋಸ್ಕರ ಸ್ವತಃ ತಾನೇ ಪೊಲೀಸರ ಮುಂದೆ ಶರಣಾಗುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: ಪುತ್ರನಿಂದ ಹಲ್ಲೆ ಪ್ರಕರಣ ಕುರಿತು ಶಾಸಕ ಹ್ಯಾರಿಸ್ ಪ್ರತಿಕ್ರಿಯಿಸಿದ್ದು ಹೀಗೆಏನಿದು ಘಟನೆ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಊಟ ಮಾಡುವ ವಿಷಯಕ್ಕಾಗಿ ಕಿರಿಕ್ ತೆಗೆದು ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ್ದಾನೆ. ಉದ್ಯಮಿ ಲೋಕ್‍ನಾಥ್ ಪುತ್ರ ವಿದ್ವತ್ ಹಲ್ಲೆಗೊಳಗಾದ ಯುವಕನಾಗಿದ್ದು, ಇವರು ಇತ್ತೀಚೆಗೆ ವಿದ್ವತ್ ಸಿಂಗಾಪೂರ್‍ನಲ್ಲಿ ಪದವಿ ಮುಗಿಸಿ ನಗರಕ್ಕೆ ಆಗಮಿಸಿದ್ದರು. ಶನಿವಾರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ಊಟ ಮಾಡುವ ವಿಷಯಕ್ಕಾಗಿ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿದೆ. ಈ ಜಗಳ ತಾರಕಕ್ಕೇರಿ ಹ್ಯಾರಿಸ್ ಅವರ ಪುತ್ರ ಮಹಮ್ಮದ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಹ್ಯಾರಿಸ್ ಮಗನ ಗೂಂಡಾಗಿರಿ -ರೆಸ್ಟೊರೆಂಟ್‍ನಲ್ಲಿ ಯುವಕನಿಗೆ ರಕ್ತ ಬರುವಂತೆ ಥಳಿಸಿ, ಆಸ್ಪತ್ರೆಗೂ ನುಗ್ಗಿ ಹಲ್ಲೆಹಲ್ಲೆಗೊಳಗಾದ ವಿದ್ವತ್ ರನ್ನು ನಗರದ ಮಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಷ್ಟಕ್ಕೆ ಸುಮ್ಮನಾಗದ ಶಾಸಕರ ಪುತ್ರ ಮತ್ತು ಆತನ ಗ್ಯಾಂಗ್ ಆಸ್ಪತ್ರೆಗೆ ನುಗ್ಗಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿದ್ದ ವಿದ್ವತ್ ಸಹೋದರ ಸಾತ್ವಿಕ್ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಇದೀಗ ವಿದ್ವತ್ ಮಲ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಈ ಸಂಬಂಧ ಮಹಮ್ಮದ್ ನಲಪಾಡ್ ಹ್ಯಾರಿಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಪ್ರಮುಖ ಆರೋಪಿಯಾಗಿರುವ ಶಾಸಕರ ಪುತ್ರ ಮಹಮ್ಮದ್ ನಲಪಾಡ್ ಪರಾರಿಯಾಗಿದ್ದಾನೆ.Sign in to your account
Username or Email Address


Password

 Remember Me


