ಬೆಂಗಳೂರು: ಲಕ್ಷ್ಮೀ ಬಾರಮ್ಮ ಧಾರಾವಾಹಿ ಮೂಲಕ ಗೊಂಬೆ ಎಂದೇ ಪ್ರಖ್ಯಾತಿ ಪಡೆದುಕೊಂಡಿರುವ ನೇಹಾ ಗೌಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದ ನೇಹಾ ಇಂದು ಸಪ್ತಪದಿ ತುಳಿದಿದ್ದಾರೆ. ನಟಿ ಸೋನುಗೌಡ ಅವರ ಸಹೋದರಿ ಆಗಿರುವ ನೇಹಾಗೌಡ ತಮ್ಮ ಬಾಲ್ಯದ ಗೆಳೆಯ ಚಂದನ್ ಅವರನ್ನು ವಿವಾಹವಾಗಿದ್ದಾರೆ. ಮೈಸೂರು ರಸ್ತೆಯಲ್ಲಿರುವ ಸಾಯಿ ಪ್ಯಾಲೆಸ್ ನಲ್ಲಿ ಅದ್ದೂರಿಯಾಗಿ ಮದುವೆ ನಡೆದಿದೆ.ಧಾರವಾಹಿಯಲ್ಲೂ ಗೊಂಬೆಯನ್ನ ಮದುವೆಯಾಗಿರುವ ನಾಯಕನ ಹೆಸರು ಚಂದನ್ ಆಗಿದ್ದು, ನಿಜ ಜೀವದಲ್ಲೂ ಮದುವೆಯಾದ ಹುಡುಗನ ಹೆಸರು ಚಂದನ್ ಆಗಿದೆ. ಚಂದನ್ ಸದ್ಯ ಬ್ಯಾಂಕಾಕ್ ನಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಕೆಲವು ದಿನಗಳ ನಂತರ ನೇಹಾಗೌಡ ಕೂಡ ಬ್ಯಾಂಕಾಕ್ ಗೆ ಪ್ರಯಾಣ ಬೆಳೆಸಲಿದ್ದಾರೆ. ನೇಹಾ ಅಭಿನಯ ಮಾಡುತ್ತಿರುವ ಲಕ್ಷ್ಮೀ ಬಾರಮ್ಮ ಧಾರಾವಾಹಿ ಚಿತ್ರೀಕರಣ ಮುಗಿಯುವ ತನಕವೂ ಗೊಂಬೆ ಪಾತ್ರದಲ್ಲಿ ನೇಹಾಗೌಡ ಅವರೇ ಮುಂದುವರಿದಿದ್ದಾರೆ ಎಂದು ತಿಳಿದು ಬಂದಿದೆ.ಸಿನಿಮಾರಂಗದ ಸಾಕಷ್ಟು ಜನರು ಹಾಗೂ ಧಾರಾವಾಹಿಯ ಕಲಾವಿದರು ಕೂಡ ಮದುವೆ ಸಮಾರಂಭದಲ್ಲಿ ಭಾಗಿ ಆಗಿದ್ದರು.






 Advertisement 




Sign in to your account
Username or Email Address


Password

 Remember Me


