ಹಾವೇರಿ: ಜಾನಪದ ಕ್ರೀಡೆ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ದೇವಿಹೊಸೂರು ಗ್ರಾಮದಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನ ಸುರೇಶ ಹೊಂಬಳಿ (37) ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ ನಡೆದಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಈ ದುರ್ಘಟನೆ ಸಂಭವಿಸಿದೆ.ಉತ್ತರ ಕರ್ನಾಟಕದಲ್ಲಿ ಹೊರಿಹಬ್ಬವನ್ನ ಅದ್ದೂರಿ ಆಚರಣೆ ಮಾಡುತ್ತಾರೆ. ಹೋರಿ ಹಿಡಿಯಲು ಹೋಗಿದ್ದ ವೇಳೆ ತಲೆಗೆ ತಿವಿದ ಕಾರಣ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಿದರೂ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಘಟನೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.Sign in to your account
Username or Email Address


Password

 Remember Me


