ದಾವಣಗೆರೆ: ಕಾರಿನಡಿ ಸಿಕ್ಕಿಹಾಕಿಕೊಂಡಿದ್ದ ಮಹಿಳೆಯನ್ನು ರಕ್ಷಿಸಿ ಯುವಕರು ಮಾನವೀಯತೆ ಮೆರೆದಿರುವ ಘಟನೆ ಜಿಲ್ಲೆಯ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.ಕೆ.ಬಿ ಕಾಲೋನಿಯಿಂದ ದಾವಣಗೆರೆಗೆ ಮಂಜುನಾಥ್ ಹಾಗೂ ದಂಪತಿ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಟೈರ್ ಬ್ಲಾಸ್ಟ್ ಆಗಿ ಪಲ್ಟಿಯಾಗಿದೆ. ಕಾರು ಪಲ್ಟಿಯಾದ ಪರಿಣಾಮ ಕಾರಿನಡಿ ಮಹಿಳೆಯೊಬ್ಬರು ಸಿಲುಕಿಕೊಂಡಿದ್ದಾರೆ.ಈ ವೇಳೆ ಅಲ್ಲೇ ರಸ್ತೆ ಪಕ್ಕದಲ್ಲಿದ್ದ ಹಳೇ ಕುಂದುವಾಡ ಗ್ರಾಮದಲ್ಲಿ ಕ್ರಿಕೆಟ್ ಆಡುತ್ತಿದ್ದ ಯುವಕರ ತಂಡ ಗಮನಿಸಿದ್ದು, ತಕ್ಷಣ ಬಂದು ಸಮಯ ಪ್ರಜ್ಞೆಯಿಂದ ಸಿಲುಕಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ನಂತರ ಗಂಭೀರವಾಗಿ ಗಾಯಗೊಂಡಿದ್ದ ದಂಪತಿಯನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ.ಈ ಘಟನೆ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Sign in to your account
Username or Email Address


Password

 Remember Me


