ರಾಮನಗರ: ತಾಲೂಕು ವೈದ್ಯಾಧಿಕಾರಿ ಕಿರುಕುಳಕ್ಕೆ ಬೇಸತ್ತು ಸ್ಟಾಫ್ ನರ್ಸ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರದಲ್ಲಿ ನಡೆದಿದೆ.ತಿಪ್ಪಸಂದ್ರ ಗ್ರಾಮದ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ ನರ್ಸ್. ಶನಿವಾರ ಆಸ್ಪತ್ರೆ ಸಿಬ್ಬಂದಿಗಳ ವಸತಿಗೃಹದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು ತಡವಾಗಿ ಬೆಳಕಿದೆ ಬಂದಿದೆ.ಮಾಗಡಿ ಡಿಎಚ್‍ಓ ಚಂದ್ರಶೇಖರಯ್ಯ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ವಿಜಯಲಕ್ಷ್ಮೀ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ಪೋಷಕರು ಆರೋಪಿಸಿದ್ದಾರೆ. ಸದ್ಯ ವಿಜಯಲಕ್ಷ್ಮೀ ಅವರಿಗೆ ಮಾಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಎಚ್‍ಓ ಚಂದ್ರಶೇಖರಯ್ಯ, ಕೆಲ ದಿನಗಳ ಹಿಂದೆ ಸೆರೆಲ್ಯಾಕ್ ಗಂಟಲಲ್ಲಿ ಸಿಲುಕಿ ಸಾವನ್ನಪ್ಪಿದ ಮಗುವಿನ ವಿಚಾರವಾಗಿ ಆಸ್ಪತ್ರೆಯ ಸಿಬ್ಬಂದಿ, ವೈದ್ಯರಿಗೆ ಸೂಚನೆ ನೀಡಿ ಘಟನೆ ಮರುಕಳಿಸದಂತೆ ಸೂಚಿಸಿದ್ದೆ. ಆದ್ರೆ ಯಾರಿಗೂ ಕಿರುಕುಳ ನೀಡಿಲ್ಲ ಅಂತ ಹೇಳಿದ್ದಾರೆ.ಘಟನೆ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.Sign in to your account
Username or Email Address


Password

 Remember Me


