ನವದೆಹಲಿ: ಕಾವೇರಿ ನ್ಯಾಯಾಧಿಕರಣದ ಐತೀರ್ಪಿನಂತೆ ನಿಗಧಿತ ಪ್ರಮಾಣದಲ್ಲಿ ನೀರು ಹರಿಸಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಕೈಬಿಟ್ಟಿದೆ.ಕಾವೇರಿ ವಿವಾದದ ಕುರಿತು ಇಂದು ಅಂತಿಮ ತೀರ್ಪು ಪ್ರಕಟಿಸಿದ ಸುಪ್ರೀಂ, ಕರ್ನಾಟಕದ ಪರ ವಾದವನ್ನು ಪರಿಗಣಿಸಿ ಐತೀರ್ಪಿನಲ್ಲಿದ್ದ ಕೆಲವು ಅಂಶಗಳಿಗೆ ಸುಧಾರಣೆ ಮಾಡಿ ತನ್ನ ತೀರ್ಪನ್ನು ಪ್ರಕಟಿಸಿತ್ತು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ 2013ರಲ್ಲಿ ತಮಿಳುನಾಡು ಸರ್ಕಾರ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಮುಂದುವರಿಸಲು ಇಚ್ಛಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಕಾವೇರಿ ನೀರು ಹಂಚಿಕೆ ಸುಪ್ರೀಂ ತೀರ್ಪಿನಲ್ಲಿ ಏನಿದೆ? ಇಲ್ಲಿದೆ 14 ಪ್ರಮುಖ ಅಂಶಗಳುಯಾವ ತಿಂಗಳಿನಲ್ಲಿ ತಮಿಳುನಾಡಿಗೆ ಎಷ್ಟು ಟಿಎಂಸಿ ನೀರು?
ಜೂನ್ 10, ಜುಲೈ 34, ಅಗಸ್ಟ್ 50, ಸೆಪ್ಟೆಂಬರ್ 40, ಅಕ್ಟೋಬರ್ 22, ನವೆಂಬರ್ 15, ಡಿಸೆಂಬರ್ 8, ಜನವರಿ 3, ಫೆಬ್ರವರಿ 2.5, ಮಾರ್ಚ್ 2.5, ಏಪ್ರಿಲ್ 2.5, ಮೇ 2.5 ಸೇರಿ ಒಟ್ಟು 192 ಟಿಎಂಸಿ ನೀರನ್ನು ಕರ್ನಾಟಕ ಪ್ರತಿವರ್ಷ ತಮಿಳುನಾಡಿಗೆ ಹರಿಸಬೇಕು ಎಂದು ನ್ಯಾಯಾಧಿಕರಣ ತನ್ನ ಐತೀರ್ಪಿನಲ್ಲಿ ತಿಳಿಸಿತ್ತು.Sign in to your account
Username or Email Address


Password

 Remember Me


