ಮಂಗಳೂರು: ಕಳೆದ ಮೂರು ದಿನಗಳ ಹಿಂದೆ ಕಾಶ್ಮೀರಕ್ಕೆ ನುಗ್ಗಿದ್ದ ಲಷ್ಕರ್-ಎ-ತೋಯ್ಬಾ ಭಯೋತ್ಪಾದಕರನ್ನು ಹೊಡೆದುರುಳಿಸಿರದ ಸಿಆರ್ ಪಿಎಫ್ ಯೋಧರ ತಂಡದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವೀರಯೋಧ ಉಗ್ರರೊಂದಿಗೆ ಸೆಣಸಾಡಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ನೇರಂಕಿ ನಿವಾಸಿ ಜುಬೇರ್ ಕಾಶ್ಮೀರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಉಗ್ರರನ್ನು ಹೊಡೆದುರುಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಲಷ್ಕರ್-ಎ-ತೋಯ್ಬಾದ ಉಗ್ರರು ಕಾಶ್ಮೀರದ ಕಟ್ಟಡವೊಂದರಲ್ಲಿ ಅವಿತು ಕುಳಿತು ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು.ಕೂಡಲೇ ಕಾರ್ಯಪ್ರವೃತ್ತರಾದ ಜುಬೇರ್ ನೇತೃತ್ವದ ಸಿಆರ್ ಪಿಎಫ್ ಯೋಧರ ತಂಡ ಕೆಲವೇ ಗಂಟೆಗಳಲ್ಲಿ ಉಗ್ರರನ್ನು ಹೊಡೆದುರುಳಿಸೋದರಲ್ಲಿ ಸಫಲರಾಗಿದ್ದರು. ದೇಶದ ನಾನಾ ಭಾಗಗಳಲ್ಲಿ ಸೇವೆ ಸಲ್ಲಿಸಿರುವ ಜುಬೇರ್ ಸೇನಾ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಶೌರ್ಯ ಮೆರೆದಿದ್ದಾರೆ.ಚಿಕ್ಕಂದಿನಿಂದಲೇ ಸೈನ್ಯ ಸೇರುವ ಬಯಕೆ ಹೊಂದಿದ್ದ ಜುಬೇರ್ ಕಾರ್ಯಕ್ಕೆ ಕರಾವಳಿಯಾದ್ಯಾಂತ ಪ್ರಶಂಸೆ ವ್ಯಕ್ತವಾಗಿದೆ.Sign in to your account
Username or Email Address


Password

 Remember Me


