ವಿಜಯಪುರ: ಒಂದನೇ ತರಗತಿಯ ವಿದ್ಯಾರ್ಥಿ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿಪಟ್ಟಣದಲ್ಲಿ ನಡೆದಿದೆ.ಪ್ರಕಾಶಸಿಂಗ ಸಿದ್ದರಾಮಸಿಂಗ ಜಮಾದಾರ(6) ನೇಣಿಗೆ ಶರಣಾದ ವಿದ್ಯಾರ್ಥಿ. ಸಿಂದಗಿ ಪಟ್ಟಣದಲ್ಲಿರುವ ಶಣ್ಮುಖೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಾಲಾ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಶಾಲೆಯವರ ಬೇಜವಾಬ್ದಾರಿಗೆ ಶಾಲೆಯ ಎದುರು ಬಾಲಕನ ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನು ಶಾಲಾ ಆಡಳಿತ ಮಂಡಳಿ ವಿರುದ್ಧ ಕುಟುಂಬಸ್ಥರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Sign in to your account
Username or Email Address


Password

 Remember Me


