ಚಿಕ್ಕಬಳ್ಳಾಪುರ: ಗಂಡು ಮಕ್ಕಳಾಗಲಿಲ್ಲ ಎನ್ನುವ ಕೊರಗಿನಿಂದ ತಾಯಿ ತನ್ನ ಮೂವರು ಹೆಣ್ಣು ಮಕ್ಕಳನ್ನ ಬಾವಿಗೆ ತಳ್ಳಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕಾಕಲಚಿಂತೆ ಗ್ರಾಮದಲ್ಲಿ ನಡೆದಿದೆ.ತಾಯಿ ನಾಗಶ್ರೀ (30) ಮಕ್ಕಳಾದ ನವ್ಯಶ್ರೀ (6) ದಿವ್ಯಶ್ರೀ (3) ಹಾಗೂ ಮೂರು ತಿಂಗಳ ಹೆಣ್ಣು ಮಗು ಸಾವನ್ನಪ್ಪಿದವರು. ಮೃತ ನಾಗಶ್ರೀ ಹಾಗೂ ಗಂಗರಾಜು ದಂಪತಿ ಏಳು ವರ್ಷಗಳ ಹಿಂದೆ ಮದುವೆಯಾಗಿದ್ದ ಇವರಿಗೆ ಮೂವರು ಹೆಣ್ಣು ಮಕ್ಕಳು ಜನಿಸಿದ್ದರು.ಆದರೆ ನಮ್ಮ ಸಂಸಾರಕ್ಕೆ ಗಂಡು ಮಕ್ಕಳಾಗಿಲ್ಲ ಎಂದು ಕೊರಗುತ್ತಿದ್ದ ನಾಗಶ್ರೀ ಇಂದು ಗ್ರಾಮದ ಹೊರವಲಯದ ಬಾವಿಗೆ ತನ್ನ ಮೂವರು ಮಕ್ಕಳನ್ನ ತಳ್ಳಿ ತಾನು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಕಾರ್ತಿಕ್ ರೆಡ್ಡಿ ಸೇರಿದಂತೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.Sign in to your account
Username or Email Address


Password

 Remember Me


