ಮೈಸೂರು: 16 ವರ್ಷದ ಅಪ್ರಾಪ್ತ ಬಾಲಕಿಗೆ 40 ವರ್ಷದ ವಿವಾಹಿತ ವ್ಯಕ್ತಿಯ ಜೊತೆ ತಾಯಿಯೇ ಮದುವೆ ಮಾಡಿರುವ ಆಘಾತಕಾರಿ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಕೆ.ಬೆಳತ್ತೂರು ಗ್ರಾಮದಲ್ಲಿ ನಡೆದಿದೆ.ನಾಗರಾಜಶೆಟ್ಟಿ ಅಪ್ರಾಪ್ತ ಬಾಲಕಿಯನ್ನು ವಿವಾಹವಾದ ವ್ಯಕ್ತಿ. ಮದುವೆ ಒಂದು ವಾರದ ಹಿಂದೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ಆರೋಪಿಗೆ ಈಗಾಗಲೇ ಮದುವೆಯಾಗಿದ್ದು, ಮೊಲದ ಪತ್ನಿ ಇರುವಾಗಲೇ ಎರಡನೇ ಮದುವೆಯಾಗಿದ್ದಾನೆ. ಅಪ್ರಾಪ್ತ ಬಾಲಕಿಯ ತಾಯಿ ಪತಿಗೆ ತಿಳಿಸದೇ ಮದುವೆ ಕಾರ್ಯ ನಡೆಸಿದ್ದಾಳೆ. ಆನಂತರ ಮದುವೆಯ ವಿಷಯ ತಿಳಿದ ಬಾಲಕಿಯ ತಂದೆ ಮಕ್ಕಳ ಮತ್ತು ಮಹಿಳಾ ಸಾಂತ್ವನ ಕೇಂದ್ರಕ್ಕೆ ದೂರು ನೀಡಿದ್ದಾರೆ.ಈ ಕುರಿತು ಮಾಹಿತಿ ಪಡೆದ ಅಧಿಕಾರಿಗಳು ಪೊಲೀಸರ ಸಹಾಯ ಪಡೆದು ಪ್ರಕರಣವನ್ನು ಬೇಧಿಸಿದ್ದಾರೆ. ಪ್ರಸ್ತುತ ಅಪಾಪ್ತ ಬಾಲಕಿಗೆ ಕೌನ್ಸಿಲಿಂಗ್ ನಡೆಸಲಾಗಿದ್ದು, ತಾಲೂಕು ಮಹಿಳಾ ಸಾಂತ್ವನ ಕೇಂದ್ರದ ವಶಕ್ಕೆ ಆಕೆಯನ್ನು ನೀಡಲಾಗಿದೆ. ಘಟನೆ ಕುರಿತು ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಬಾಲ್ಯವಿವಾಹ ಪ್ರಕರಣ ದೂರು ದಾಖಲಾಗಿದೆ.Sign in to your account
Username or Email Address


Password

 Remember Me


