ಬೆಂಗಳೂರು: ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ 3 ಕಾರು, ಒಂದು ಲಾರಿ ಹಾಗೂ ಒಂದು ಮಿನಿಬಸ್ ನಡುವೆ ಪರಸ್ಪರ ಹಿಂದಿನಿಂದ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಅದೃಷ್ಟವಶಾತ್ ಐದು ವಾಹನಗಳಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ತುಮಕೂರು ಮಾರ್ಗದಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ವಾಹನಗಳ ನಡುವೆ ಅಪಘಾತವಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಶಿವರಾತ್ರಿ ಹಿನ್ನೆಲೆ ದೇವಾಲಯಕ್ಕೆ ಹಾಗೂ ವಾರದ ರಜೆ ಹಿನ್ನೆಲೆ ದೂರದ ಊರುಗಳಿಗೆ ತೆರಳುತ್ತಿದ್ದರು.ಲಾರಿ ಚಾಲಕನ ನಿರ್ಲಕ್ಷದಿಂದ ಈ ಸರಣಿ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.Sign in to your account
Username or Email Address


Password

 Remember Me


