ಬೆಂಗಳೂರು: ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ಅಂಕಿತ ಹಾಕಿದ್ದಾರೆ.ಕರ್ನಾಟಕ ಸಾರ್ವಜನಿಕ ಪರೀಕ್ಷಾ (ಭ್ರಷ್ಟಾಚಾರ) ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪುರಸಭೆಗಳು ಹಾಗೂ ಇತರೆ ಕಾನೂನು ವಿಧೇಯಕಕ್ಕೆ ರಾಜ್ಯಪಾಲರು ಸೋಮವಾರ ಸಹಿ ಹಾಕಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ದಿನ ಮಲ್ಲೇಶ್ವರಂನ ಬಿಜೆಪಿ ಕಚೇರಿ ಸ್ಫೋಟಕ್ಕೆ ಸಂಚು – ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಟ್ವಿಸ್ಟ್ಕೆಲವು ಸ್ಪಷ್ಟನೆ ಕೇಳಿ ವಿಧೇಯಕಗಳನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದರು. ಸರ್ಕಾರದ ಸ್ಪಷ್ಟನೆ ನಂತರ ವಿಧೇಯಕಗಳಿಗೆ ಅಂಕಿತ ಸಿಕ್ಕಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.11 ವಿಧೇಯಕಗಳ ಪೈಕಿ 3 ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಇನ್ನೂ 8 ವಿಧೇಯಕಗಳಿಗೆ ರಾಜ್ಯಪಾಲರ ಅನುಮೋದನೆ ಪಡೆಯುವುದು ಬಾಕಿ ಇದೆ. ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗಿಫ್ಟ್; ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಅಸ್ತುSign in to your account
Username or Email Address


Password

 Remember Me


