ಕಾರವಾರ: ಕುಷನ್ ಶಾಪ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಂಗಡಿಯಲ್ಲಿಟ್ಟಿದ್ದ ಹಣ ಹಾಗೂ ವಸ್ತುಗಳು ಸಂಪೂರ್ಣ ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನಿಲೇಕಣಿಯಲ್ಲಿ ನಡೆದಿದೆ.ಕುಮಟಾ ಮೂಲದ ತಿಮ್ಮಪ್ಪ ರಾಮಚಂದ್ರ ಎಂಬವರಿಗೆ ಸೇರಿದ ಕುಷನ್ ಷಾಪ್ ಇದಾಗಿದ್ದು ಮಧ್ಯರಾತ್ರಿ ವೇಳೆ ಸಂಭವಿಸಿದ್ದು ಅಂಗಡಿಯಲ್ಲಿಟ್ಟಿದ್ದ ಹದಿನೈದು ಸಾವಿರಕ್ಕೂ ಹೆಚ್ಚಿನ ಹಣ ಹಾಗೂ ಹತ್ತು ಲಕ್ಷಕ್ಕೂ ಹೆಚ್ಚಿನ ವಸ್ತುಗಳು ಬೆಂಕಿಗಾಹುತಿಯಾಗಿದೆ.ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದು ಡಿ.ವೈ ಎಸ್ಪಿ ಡಿ.ಎಲ್ ನಾಗೇಶ್, ಪಿಎಸ್‍ಐ ಮಾದೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


