ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ನೆತ್ತರು ಹರಿದಿದೆ. ದಾರಿಯಲ್ಲಿ ನಡೆದು ಹೋಗುತ್ತಿದ್ದ ಯುವಕನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸಿಟಿ ಮಾರ್ಕೆಟ್ ಬಳಿ ನಡೆದಿದೆ.ಕೊಲೆಯಾದ ದುರ್ದೈವಿಯನ್ನು ರಾಜಸ್ಥಾನ ಮೂಲದ ಬಬ್ರರಾಮ್ ದೇವಾಸಿ ಅಂತ ಗುರುತಿಸಲಾಗಿದೆ. ರಾಜಸ್ಥಾನದ ಬಬ್ರರಾಮ್ ದೇವಾಸಿ 3 ದಿನಗಳ ಹಿಂದಷ್ಟೆ ಬೆಂಗಳೂರಿಗೆ ಬಂದಿದ್ದವ ಸ್ನೇಹಿತರ ರೂಮ್‍ನಲ್ಲಿ ವಾಸವಿದ್ದರು.ಸೋಮವಾರ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಅಂಗಡಿಯೊಂದರಲ್ಲಿ ಕೆಲ್ಸ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಕಳ್ಳರು ಮೊಬೈಲ್ ಕಿತ್ತುಕೊಳ್ಳೋಕೆ ಪ್ರಯತ್ನಿಸಿದ್ದಾರೆ. ಈ ವೇಳೆ ದೇವಾಸಿ ಮೊಬೈಲ್ ಕೊಡೋದಕ್ಕೆ ನಿರಾಕರಿಸಿದ್ದಾರೆ. ಇದರಿಂದ ಕುಪಿತಗೊಂಡ ಆರೋಪಿಗಳು ಬಬ್ರರಾಮ್ ದೇವಾಸಿ ತೊಡೆಗೆ ಚಾಕುವಿನಿಂದ ಇರಿದಿದ್ದಾರೆ.ಘಟನೆಯಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ಸ್ಥಳೀಯರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ರು. ಆದ್ರೆ ತೀವ್ರ ರಕ್ತಸ್ರಾವವಾಗಿದ್ದರಿಂದ ದೇವಾಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಸಿಟಿ ಮಾರ್ಕೆಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.ಸದ್ಯ ಪ್ರಕರಣ ದಾಖಲಿಸಿಕೊಂಡಿರೋ ಸಿಟಿ ಮಾರ್ಕೇಟ್ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದಾರೆ. Sign in to your account
Username or Email Address


Password

 Remember Me


