ಬೆಂಗಳೂರು: ಬಿಗ್ ಬಾಸ್ ಕನ್ನಡದ 5ನೇ ಆವೃತ್ತಿಯಲ್ಲಿ ಸ್ಪರ್ಧಿಸಿದ್ದ ಶ್ರುತಿ ಪ್ರಕಾಶ್ ಗೆ ಕಾರ್ಯಕ್ರಮ ಮುಗಿದ ಮೇಲೆ ಸಿನಿಮಾ ಮಾಡುವ ಅವಕಾಶ ಸಿಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಅದರಂತೆ ಈಗ ಶ್ರುತಿಗೆ ಸ್ಯಾಂಡಲ್ ವುಡ್ ನಿಂದ ಆಫರ್ ಗಳೇ ಹರಿದುಬರುತ್ತಿವೆ.ಇದುವರೆಗೂ ಯಾವ ಚಿತ್ರವನ್ನು ಒಪ್ಪಿಕೊಳ್ಳದ ಶ್ರುತಿ ಪ್ರಕಾಶ್, ಈಗ ಕನ್ನಡದ ಸ್ಟಾರ್ ನಿರ್ದೇಶಕರೊಬ್ಬರ ಚಿತ್ರಕ್ಕೆ ನಾಯಕಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಳಗಾವಿ ಮೂಲದ ಶ್ರುತಿ ಪ್ರಕಾಶ್ ಸದ್ಯ ಮುಂಬೈನಲ್ಲಿ ನೆಲೆಸಿದ್ದಾರೆ. ವೃತ್ತಿಯಲ್ಲಿ ಗಾಯಕಿಯಾಗಿರುವ ಶ್ರುತಿ, ಅಭಿನಯದಲ್ಲೂ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಅಲ್ಲದೇ ಶೃತಿ ಅದ್ಭುತವಾಗಿ ಡ್ಯಾನ್ಸ್ ಮಾಡುತ್ತಾರೆ.ಕಲಾ ಸಾಮ್ರಾಟ್ ಎಸ್.ನಾರಾಯಣ್ ನಿರ್ದೇಶನ ಮಾಡಲಿರುವ ಮುಂದಿನ ಚಿತ್ರಕ್ಕೆ ಬಿಗ್ ಬಾಸ್ ಖ್ಯಾತಿಯ ಶ್ರುತಿ ಪ್ರಕಾಶ್ ನಾಯಕಿಯಾಗಲಿದ್ದಾರೆ. ಈ ಬಗ್ಗೆ ಈಗಾಗಲೇ ಕಲಾ ಸಾಮ್ರಾಟ್ ನಿರ್ದೇಶನದ ಮುಂದಿನ ಚಿತ್ರದಲ್ಲಿ ನಾಯಕಿ ಆಗಿ ಅಭಿನಯಿಸುವುದರ ಬಗ್ಗೆ ಮಾತುಕತೆ ನಡೆಯುತ್ತಿದೆ. ಆದರೆ ಅಂತಿಮ ನಿರ್ಧಾರ ಇನ್ನಷ್ಟೆ ಹೊರಬೀಳಬೇಕಿದೆ.ಎಸ್ ನಾರಾಯಣ್ ನಿರ್ದೇಶನ ಮಾಡಲಿರುವ ಹೊಸ ಚಿತ್ರಕ್ಕೆ ತಮ್ಮ ಮಗ ಪಂಕಜ್ ನಾಯಕನಾಗಿದ್ದು, ಈಗಾಗಲೇ ಸ್ಕ್ರಿಪ್ಟ್ ಕೆಲಸ ಮುಗಿಸಿದ್ದಾರೆ. ಸಿನಿಮಾ ಆರಂಭ ಮಾಡುವ ತಯಾರಿಯಲ್ಲಿದ್ದಾರೆ. ಈ ಚಿತ್ರದ ಇನ್ನೊಂದು ವಿಶೇಷ ಅಂದರೆ ಬಿಗ್ ಬಾಸ್ ಕನ್ನಡ 5 ವಿನ್ನರ್ ಚಂದನ್ ಶೆಟ್ಟಿ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದಾರೆ ಎನ್ನಲಾಗಿದೆ. ಹಲವು ವಿಶೇಷತೆಗಳೊಂದಿಗೆ ಆರಂಭವಾಗಲಿರುವ ಈ ಚಿತ್ರದ ಬಗ್ಗೆ ಅಧಿಕೃತವಾಗಿ ಬಹಿರಂಗವಾಗಬೇಕಿದೆ.Sign in to your account
Username or Email Address


Password

 Remember Me


