ವಿಜಯಪುರ: 11 ವರ್ಷದ ಬಾಲಕಿಯನ್ನ ಹೊತ್ತೊಯ್ದು ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ವಿಜಯಪುರ ತಾಲೂಕಿನ ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಆರೋಪಿ 42 ವರ್ಷದ ಅಶೋಕ ಭಾವಿಕಟ್ಟಿ ಈ ಪೈಶಾಚಿಕ ಕೃತ್ಯ ಎಸಗಿದ್ದಾನೆ. ಶುಕ್ರವಾರ ಬಾಲಕಿ ಮನೆ ಮುಂದೆ ಆಡವಾಡುತ್ತಿದ್ದಳು. ಈ ವೇಳೆ ಆರೋಪಿ ಅಶೋಕ ಭಾವಿಕಟ್ಟಿ ಬಾಲಕಿಯನ್ನು ಹೊತ್ತೊಯ್ದಿದ್ದು, ಗ್ರಾಮದ ಹೊರಗೆ ಜಮೀನಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ ಪರಾರಿಯಾಗಿದ್ದಾನೆ.ಬಳಿಕ ಬಾಲಕಿ ಬಂದು ಪೋಷಕರಿಗೆ ವಿಷಯ ತಿಳಿಸಿದ್ದು, ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಸಂಬಂಧ ಬಬಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ಬಬಲೇಶ್ವರ ಕ್ಷೇತ್ರದ ಬಿಜೆಪಿ ಮುಖಂಡರ ಜೊತೆ ಗುರುತಿಸಿಕೊಂಡಿದ್ದ ಎನ್ನಲಾಗುತ್ತಿದೆ. ಪ್ರಕರಣವನ್ನು ಮುಚ್ಚಿಹಾಕಲು ಬಿಜೆಪಿ ಮುಖಂಡರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ.Sign in to your account
Username or Email Address


Password

 Remember Me


