ಮೈಸೂರು: ವ್ಯಕ್ತಿಯ ಮರ್ಮಾಂಗವನ್ನೇ ಕತ್ತರಿಸಿ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಜಿಲ್ಲೆಯ ಹುಣಸೂರಿನ ರಂಗನಾಥ ಬಡಾವಣೆಯಲ್ಲಿ ನಡೆದಿದೆ.ಬಡಾವಣೆ ನಿವಾಸಿ ಮಹೇಶ್(45) ಮೃತ ದುರ್ದೈವಿ. ಇಂದು ಮುಂಜಾನೆ ಮೃತದೇಹವನ್ನ ಸ್ಥಳೀಯರು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ನಂತರ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.ಮಹೇಶ್ ಈಗಾಗಲೇ ಮದುವೆಯಾಗಿದ್ದು, ಬೇರೊಬ್ಬ ಮಹಿಳೆಯ ಜೊತೆ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈ ವಿಚಾರ ಮೊದಲನೇ ಪತ್ನಿಗೆ ತಿಳಿಯುತ್ತಿದ್ದಂತೆ ಆಕೆಯ ಸಂಬಂಧಿಕರು ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದಾನೆ ಎಂದು ಶಂಕಿಸಿ ಗುರುವಾರ ರಾತ್ರಿ ಹೊರಗಡೆ ಮಲಗಿದ್ದ ಮಹೇಶ್ ನ ಮರ್ಮಾಂಗ ಕತ್ತರಿಸಿ ಕೊಲೆ ಮಾಡಿ ಹೋಗಿದ್ದಾರೆ ಎಂದು ಹೇಳಲಾಗಿದೆ.ಈ ಘಟನೆ ಸಂಬಂಧ ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Sign in to your account
Username or Email Address


Password

 Remember Me


