ಮಡಿಕೇರಿ: ಎರಡು ಕೆಎಸ್‍ಆರ್ ಟಿಸಿ ಬಸ್‍ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಚಾಲಕರು ಮೃತಪಟ್ಟಿದ್ದು, ಸುಮಾರು 15 ಮಂದಿಗೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಡೆದಿದೆ.ಮಡಿಕೇರಿಯಿಂದ ಹಾಸನಕ್ಕೆ ತೆರಳುತ್ತಿದ್ದ ಮತ್ತು ಮೈಸೂರಿನಿಂದ ಮಡಿಕೇರಿ ಕಡೆಗೆ ಆಗಮಿಸುತ್ತಿದ್ದ ಕೆಎಸ್‍ಆರ್ ಟಿಸಿ ಬಸ್ ಗಳ ನಡುವೆ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ಬಳಿ ಅಪಘಾತ ಸಂಭವಿಸಿದೆ. ಈ ಘಟನೆಯಿಂದ ಎರಡೂ ಬಸ್ ಗಳ ಚಾಲಕರಾದ ಪಾಲಾಕ್ಷ ಹಾಗೂ ಷರೀಫ್ ಸಾವನ್ನಪ್ಪಿದ್ದಾರೆ.ಹಾಸನ ಕಡೆಗೆ ತೆರಳುತ್ತಿದ್ದ ಬಸ್ ಚಾಲಕ ಪಾಲಾಕ್ಷನ ಅಜಾಗರುಕತೆಯ ಚಾಲನೆಯೇ ಈ ಘಟನೆಗೆ ಕಾರಣ ಎನ್ನಲಾಗಿದ್ದು, ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುಂಬದಿಯಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಎರಡು ಬಸ್ ಚಾಲಕರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಸುಮಾರು 15ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಾಗಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ಈ ಘಟನೆ ಸಂಬಂಧ ಸುಂಟಿಕೋಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಅಪಘಾತದಿಂದ ಕೆಲಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.Sign in to your account
Username or Email Address


Password

 Remember Me


