ಹಾವೇರಿ: ವಿಧಾನಸಭೆ ಮಾಜಿ ಸಭಾಧ್ಯಕ್ಷ ಬಿ.ಜಿ.ಬಣಕಾರ ಅವರು ಪಟ್ಟಣದ ತಮ್ಮ ನಿವಾಸದಲ್ಲಿ ಬುಧವಾರ ರಾತ್ರಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಣಕಾರ ಅವರಿಗೆ 91 ವರ್ಷ ವಯಸ್ಸಾಗಿತ್ತು.1972ರಲ್ಲಿ ಕಾಂಗ್ರೆಸ್, 1983ರಲ್ಲಿ ಪಕ್ಷೇತರ ಮತ್ತು 1985ರಲ್ಲಿ ಜನತಾ ದಳದಿಂದ ಶಾಸಕರಾಗಿ ಒಟ್ಟು ಮೂರು ಬಾರಿ ಬಿ.ಜಿ.ಬಣಕಾರ ವಿಧಾನಸಭೆ ಪ್ರವೇಶಿಸಿದ್ದರು. ದಿ.ದೇವರಾಜ ಅರಸು ಸಂಪುಟದಲ್ಲಿ ಪಶುಸಂಗೋಪನೆ ಸಚಿವರಾಗಿದ್ದ ಬಿ.ಜಿ.ಬಣಕಾರ, ದಿ.ರಾಮಕೃಷ್ಣ ಹೆಗಡೆಯವರ ಅವಧಿಯಲ್ಲಿ ವಿಧಾನಸಭೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.ಮೃತರಿಗೆ ಹಿರೇಕೆರೂರು ಬಿಜೆಪಿ ಶಾಸಕ ಯು.ಬಿ.ಬಣಕಾರ ಸೇರಿದಂತೆ ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಇಂದು ಮಧ್ಯಾಹ್ನ ಮೂರು ಗಂಟೆಗೆ ಪಟ್ಟಣದ ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ. ಸರಳ, ಸಜ್ಜನ ರಾಜಕಾರಣಿಯಾಗಿದ್ದ ಬಿ.ಜಿ.ಬಣಕಾರ ನಿಧನಕ್ಕೆ ಜಿಲ್ಲೆಯ ವಿವಿಧ ಪಕ್ಷಗಳ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.  Sign in to your account
Username or Email Address


Password

 Remember Me


