ಗದಗ: ಟ್ರ್ಯಾಕ್ಟರ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಗದಗ ನಗರದ ಮುಂಡರಗಿ ರಸ್ತೆ ಹೊರವಲಯದಲ್ಲಿ ನಡೆದಿದೆ.ದೇವರ ದರ್ಶನ ಮುಗಿಸಿಕೊಂಡು ಊರಿಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಸುಮಾರು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ಕೊಪ್ಪಳ ಜಿಲ್ಲೆಯ ಕವಲೂರ ಗ್ರಾಮದ ಒಂದೇ ಕುಟುಂಬದವರು ಎನ್ನಲಾಗಿದೆ.ಇವರೆಲ್ಲರೂ ಸವದತ್ತಿ ಯಲ್ಲಮ್ಮನ ಜಾತ್ರೆ ಮುಗಿಸಿಕೊಂಡು ಸ್ವಗ್ರಾಮ ಕವಲೂರು ಗ್ರಾಮಕ್ಕೆ ಹೊರಟಿದ್ದರು. ಈ ವೇಳೆ ಮತ್ತೊಂದು ವಾಹನವನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಚಾಲಕನ ಅಜಾಗರೂಕತೆಯಿಂದ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಟ್ರ್ಯಾಕ್ಟರ್ ನಲ್ಲಿ ಇದ್ದ ಮಹಿಳೆಯರು ಹಾಗೂ ಚಿಕ್ಕ ಮಕ್ಕಳಿಗೆ ಹೆಚ್ಚು ಗಾಯಗಳಾಗಿವೆ.ಗಾಯಾಳುಗಳನ್ನ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಗದಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


