ಬೆಂಗಳೂರು: ಶಿವರಾತ್ರಿಯ ದಿನ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಇವತ್ತು ಹಾಗೂ ನಾಳೆ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆ ಕೂಡ ಆಗುವ ಸಾಧ್ಯತೆ ಇದೆ. ತಮಿಳುನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವಿದೆ ಎಂದು ಅವರು ಮಾಹಿತಿ ನೀಡಿದರು.Sign in to your account
Username or Email Address


Password

 Remember Me


