ಬೆಂಗಳೂರು: ಕರ್ನಾಟಕದಲ್ಲಿ ಮನೆ ಮಾತಾಗಿರುವ ಪಬ್ಲಿಕ್ ಟಿವಿ ಈಗ ಸಿನೆಮಾ ಕ್ಷೇತ್ರಕ್ಕೂ ಕಾಲಿಡುತ್ತಿದೆ. ರೈಟ್ ಮೆನ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಮೂಹದಿಂದ ಆರಂಭವಾಗಲಿರುವ ‘ಪಬ್ಲಿಕ್ ಮೂವೀಸ್’ ಚಾನೆಲ್ ಫೆ.12ರಂದು ಅಧಿಕೃತವಾಗಿ ಲೋಕಾರ್ಪಣೆಗೊಳ್ಳಲಿದೆ. ಎಚ್.ಆರ್.ರಂಗನಾಥ್ ನೇತೃತ್ವದ ಪಬ್ಲಿಕ್ ಮೂವೀಸ್ ಚಾನೆಲ್ ಉದ್ಘಾಟನೆಗೆ ಚಿತ್ರರಂಗದ ಪ್ರಮುಖ ಗಣ್ಯರು ಆಗಮಿಸಿ ಶುಭ ಕೋರಲಿದ್ದಾರೆ.ರೈಟ್ ಮೆನ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಡಿ ಆರಂಭವಾದ ಪಬ್ಲಿಕ್ ಟಿವಿ ಕೂಡಾ ಫೆಬ್ರವರಿ 12ರಂದು 6ನೇ ವರ್ಷದ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದೆ. 2012ರ ಫೆಬ್ರವರಿ 12ರಂದು ಪಬ್ಲಿಕ್ ಟಿವಿ ಲೋಕಾರ್ಪಣೆಗೊಂಡಿತ್ತು. ಬಳಿಕ 2014ರ ಸೆಪ್ಟೆಂಬರ್ 28ರಂದು ಪಬ್ಲಿಕ್ ಮ್ಯೂಸಿಕ್ ವಾಹಿನಿ ಆರಂಭಗೊಂಡಿತ್ತು.2012ರಲ್ಲಿ ಆರಂಭಗೊಂಡ ಪಬ್ಲಿಕ್ ಟಿವಿ ಹಾಗೂ 2014ರಲ್ಲಿ ಆರಂಭಗೊಂಡ ಪಬ್ಲಿಕ್ ಮ್ಯೂಸಿಕ್ ವಾಹಿನಿ ರಾಜ್ಯದ ಮೂಲೆ ಮೂಲೆಯಲ್ಲೂ ಮನೆ ಮಾತಾಗಿದೆ. ಇದಕ್ಕೆ ಕಾರಣೀಕರ್ತರಾದ ಜನರಿಗೆ ನಾವು ಆಭಾರಿ. ಈ ಹಿಂದೆ ಎರಡು ಚಾನೆಲ್‍ಗಳನ್ನು ಕೈ ಹಿಡಿದಂತೆಯೇ ಪಬ್ಲಿಕ್ ಮೂವೀಸ್ ವಾಹಿನಿಯನ್ನು ಕೂಡಾ ಸ್ವೀಕರಿಸುತ್ತಾರೆ ಎಂಬ ನಂಬಿಕೆ ನಮಗಿದೆ. ನಮ್ಮ ಮೇಲೆ ವಿಶ್ವಾಸವಿಟ್ಟ ಎಲ್ಲಾ ಕನ್ನಡಿಗರಿಗೂ ಧನ್ಯವಾದ ಎಂದು ಪಬ್ಲಿಕ್ ಟಿವಿ, ಮ್ಯೂಸಿಕ್ ಚಾನೆಲ್ ಮುಖ್ಯಸ್ಥರಾದ ಎಚ್.ಆರ್.ರಂಗನಾಥ್ ಹೇಳಿದ್ದಾರೆ.ಪಬ್ಲಿಕ್ ಮೂವೀಸ್ ಚಾನೆಲ್ ನಲ್ಲಿ ನೀವು 24 ಗಂಟೆಗಳ ಕಾಲವೂ ಕನ್ನಡ ಸಿನೆಮಾಗಳನ್ನು ನೋಡಿ ಆನಂದಿಸಬಹುದು. ನಿಮ್ಮೂರಲ್ಲಿ ಪಬ್ಲಿಕ್ ಮೂವೀಸ್ ನಿಮಗೆ ವೀಕ್ಷಣೆಗೆ ಲಭ್ಯವಾಗದಿದ್ದರೆ ನೀವು ನಿಮ್ಮ ಕೇಬಲ್ ಆಪರೇಟರ್ ಗಳನ್ನು ಸಂಪರ್ಕಿಸಬಹುದು.ಪಬ್ಲಿಕ್ ಮೂವೀಸ್ ಫೇಸ್ ಬುಕ್ ಪೇಜ್ ಲೈಕ್ ಮಾಡಿ: https://www.facebook.com/PublicTVMoviesಟ್ವಿಟ್ಟರ್‍ನಲ್ಲಿ ಪಬ್ಲಿಕ್ ಮೂವೀಸ್ ಫಾಲೋ ಮಾಡಿ: https://twitter.com/PublicTVMoviesSign in to your account
Username or Email Address


Password

 Remember Me


