ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಟ್ವೀಟ್ ಮಾಡಿದ್ದ ನಟಿ ರಮ್ಯಾ ವಿರುದ್ಧ ನಟ ಗಣೇಶ್ ಪತ್ನಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಶಿಲ್ಪಾ ಗಣೇಶ್ ಗರಂ ಆಗಿದ್ದು, “ರಮ್ಯಾ ಹೆಸರಲ್ಲೇ ರಮ್ ಇದೆ. ಟ್ವೀಟ್ ಮಾಡುವಾಗೆಲ್ಲ ರಮ್ಯಾ ಕುಡಿದಿರುತ್ತಾರೆ ಅನ್ಸುತ್ತೆ” ಎಂದು ಟ್ವೀಟ್ ಮಾಡಿದ್ದಾರೆ.ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಆಗಿರುವ ರಮ್ಯಾ ವಿರುದ್ಧ ಶಿಲ್ಪಾ ಗಣೇಶ್, “ಸತತ ಸೋಲಿಗೆ ತಲೆಕೆಟ್ಟು ಆಗಾಗ ಗುಟ್ಟಾಗಿ ವಿದೇಶಕ್ಕೆ ಹೋದವರಿಗೆ ನಶೆಯ ವಿಚಾರ ಚೆನ್ನಾಗಿ ತಿಳಿದಿರುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.ಭಾಷಣದಲ್ಲಿ ರೈತರು ತಮ್ಮ ಟಾಪ್ ಆದ್ಯತೆ ಎಂದು ಮೋದಿ ಹೇಳಿದ್ದರು. ಟಾಪ್ ಎಂದರೆ ಟೊಮೆಟೋ, ಈರುಳ್ಳಿ, ಪೊಟಾಟ್ಯೋ ಎಂದು ವಾಖ್ಯಾನಿಸಿದ್ದರು. ಇದನ್ನೇ ಉಲ್ಲೇಖಿಸಿದ ರಮ್ಯಾ ಟಾಪ್ ನನ್ನು ಉಲ್ಟಾ ಬರೆದು ಪಾಟ್ ಮಾಡಿದ್ದರು. ಪಾಟ್ ಎಂದರೆ ಮಾದಕ ದ್ರವ್ಯ. ಮರಿಜುನಾ ಮಾದಕ ದ್ರವ್ಯ ಗಿಡಕ್ಕೆ ಪಾಟ್ ಎನ್ನುವ ಹೆಸರೂ ಇದೆ.  ಇದನ್ನು ಓದಿ: ಈಕೆ ಯಾರು? ಸಾಧನೆ ಏನು? ಕನ್ನಡ ಬಾರದ ಕಾಡುಪಾಪ- ಮೋದಿ ಕಾಲೆಳೆದ ರಮ್ಯಾ ವಿರುದ್ಧ ಜಗ್ಗೇಶ್ ಕಿಡಿಪದಪುಂಜ ಬಿಡಿಸೋದು ಬಿಟ್ಟರೆ ಪ್ರಧಾನಿ ರೈತರ ಬಗ್ಗೆ ಏನೂ ಮಾಡಿಲ್ಲ. ಕರ್ನಾಟಕದಲ್ಲಿ 3,500 ರೈತರು ಸಾವನ್ನಪ್ಪಿದ್ದರೂ ಗುಜರಾತ್, ಆಂಧ್ರ, ರಾಜಸ್ಥಾನ, ತಮಿಳುನಾಡಿಗೆ ಹೆಚ್ಚು ಪರಿಹಾರ ಕೊಟ್ಟಿರೋ ಮೋದಿ ಸರ್ಕಾರ ಕರ್ನಾಟಕಕ್ಕೆ ಅತ್ಯಂತ ಕಡಿಮೆ ಬರ ಪರಿಹಾರ ಕೊಟ್ಟಿದೆ. ಸಿದ್ದರಾಮಯ್ಯ 1,165 ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದರೆ, ಮೋದಿ ಸರ್ಕಾರ ಮಾಡಿರೋ ಸಾಲ ಮನ್ನಾ ಸೊನ್ನೆ ಎಂದು ರಮ್ಯಾ ತಿರುಗೇಟು ನೀಡಿದ್ದರು.  ಇದನ್ನು ಓದಿ: 2013ರ ಟ್ವೀಟ್ ಎತ್ತಿ ಮೋದಿ ವಿರುದ್ಧ ರಮ್ಯಾ ವಾಗ್ದಾಳಿಪ್ರಧಾನಿ ಮೋದಿ ಅವರ ಟಾಪ್ (T-O-P)  ಕುರಿತು ಟ್ವೀಟ್ ಮಾಡಿರುವ ರಮ್ಯಾ ಅವರು, ನೀವು `P-O-T’ ನಲ್ಲಿದ್ದಾಗ ಹಾಗೇ ಆಗುತ್ತದೆ ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದರು. ಇದನ್ನು ಓದಿ: ಮೋದಿ ವಿರುದ್ಧದ ರಮ್ಯಾ ಟ್ವೀಟ್ ಗೆ ಶಾಸಕ ಜಮೀರ್ ಅಹಮದ್ ಅಸಮಾಧಾನ!






 Advertisement 




Sign in to your account
Username or Email Address


Password

 Remember Me


