ದಾವಣಗೆರೆ: ಮೈಲಾರಕ್ಕೆ ತೆರಳಿ ವಾಪಸ್ಸಾಗುವಾಗ ಟ್ರ್ಯಾಕ್ಟರ್ ಟಯರ್ ಸ್ಫೋಟಗೊಂಡು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆಯ ಹೊರವಲಯದಲ್ಲಿ ನಡೆದಿದೆ.ಮೀನಾ ಹಾಗೂ ಹನುಮಕ್ಕ ಮೃತ ದುರ್ದೈವಿಗಳು. ಘಟನೆಯಲ್ಲಿ ಒಂದೂವರೆ ವರ್ಷದ ಕಾವೇರಿ ಎಂಬ ಮಗುವಿಗೆ ಗಂಭೀರ ಗಾಯಗಳಾಗಿದೆ.ಶನಿವಾರ ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಮೈಲಾರದ ಕಾರಣಿಕ ಜಾತ್ರೆ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದಾಗ ದಾವಣಗೆರೆ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರ ಶಾಮನೂರು ಬಳಿ ಟ್ರ್ಯಾಕ್ಟರ್ ಟಯರ್ ಬ್ಲಾಸ್ಟ್ ಆಗಿ ಹೆದ್ದಾರಿಯಿಂದ ಸರ್ವಿಸ್ ರೋಡಿಗೆ ಉರುಳಿ ಬಿದ್ದಿದೆ.ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು. ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Sign in to your account
Username or Email Address


Password

 Remember Me


