ಹಾಸನ: ಅಣ್ಣನ ಮದುವೆ ಕಾರ್ಡ್ ಕೊಡುವ ನೆಪದಲ್ಲಿ ಮನೆಗೆ ಬಂದು ದಂಪತಿಗೆ ಚಾಕುವಿನಿಂದ ಇರಿದು ದರೋಡೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.ಈ ಘಟನೆ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದ್ದು, ವಾಗೀಶ್(61), ಸಾವಿತ್ರಿ(55) ಇರಿತಕ್ಕೊಳಗಾದ ದಂಪತಿ. ವಾಗೀಶ್ ಬಳಿ ಇಮ್ರಾನ್ ಎಂಬಾತ ಕೆಲಸ ಮಾಡಿಕೊಂಡಿದ್ದನು. ಇಂದು ಬೆಳಗ್ಗೆ ಇಮ್ರಾನ್ ತನ್ನ ಅಣ್ಣನ ಮದುವೆ ಕಾರ್ಡ್ ನೀಡಲು ವಾಗೀಶ್ ಮನೆಗೆ ಬಂದಿದ್ದಾನೆ. ಈ ವೇಳೆ ಮನೆಯಲ್ಲಿದ್ದ ದಂಪತಿಗೆ ಚಾಕು ಇರಿದು ಸುಮಾರು 3 ಲಕ್ಷ ರೂ. ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾನೆ ವಾಗೀಶ್ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.ಹಲ್ಲೆಗೊಳಗಾದ ದಂಪತಿಯನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಕುವೆಂಪು ನಗರ ಬಡಾವಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ನಾಪತ್ತೆಯಾಗಿರುವ ಇಮ್ರಾನ್ ಪತ್ತೆಗಾಗಿ ಪೊಲೀಸರು ವಿಶೇಷ ಜಾಲ ಬೀಸಿದ್ದಾರೆ.Sign in to your account
Username or Email Address


Password

 Remember Me


