ಧಾರವಾಡ: ಒಣ ಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್‍ಗೆ ಬೆಂಕಿ ಹೊತ್ತಿಕೊಂಡು ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಸುಮಾರು 30 ಸಾವಿರ ರೂಪಾಯಿ ಮೌಲ್ಯದ ಮೇವು ಭಸ್ಮವಾದ ಘಟನೆ ನಡೆದಿದೆ.ಧಾರವಾಡದ ಕೋರ್ಟ್ ವೃತ್ತದ ಬಳಿ ಈ ಘಟನೆ ನಡೆದಿದ್ದು, ಟ್ರ್ಯಾಕ್ಟರ್ ನಲ್ಲಿ ಮೇವು ತುಂಬಿಕೊಂಡು ನಂದಗಡದಿಂದ ನವಲೂರಿಗೆ ಹೊರಟಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.ಮೇವು ರಸ್ತೆ ಮಧ್ಯದ ಬಿಆರ್‍ಟಿಎಸ್ ಬಸ್ ನಿಲ್ದಾಣಕ್ಕೆ ತಾಗುವುದನ್ನು ತಪ್ಪಿಸಲು ಹೋದಾಗ ಮತ್ತೊಂದು ಬದಿಯಿದ್ದ ಟ್ರಾನ್ಸ್ ಫಾರ್ಮರ್ ಗೆ ಟ್ರ್ಯಾಕ್ಟರ್ ತಾಗಿ ಕೂಡಲೇ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.Sign in to your account
Username or Email Address


Password

 Remember Me


