ಚಾಮರಾಜನಗರ: ಚಾಲಕನ ನಿದ್ದೆ ಮಂಪರಿನಿಂದ ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಬಳಿ ನಡೆದಿದೆ.ಇಂದು ಮುಂಜಾನೆ ಕೇರಳ ಸಾರಿಗೆ ಬಸ್ ಮೈಸೂರಿನಿಂದ ಕ್ಯಾಲಿಕೇಟಗೆ ಹೋಗುತ್ತಿತ್ತು. ಈ ಬಸ್ಸಿನಲ್ಲಿ ಸುಮಾರು 30 ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಬಸ್ ಸುಮಾರು 7 ಗಂಟೆಗೆ ಭೀಮನಬೀಡು ತಲುಪಿದೆ. ಈ ವೇಳೆ ಚಾಲಕನ ನಿದ್ದೆ ಮಂಪರಿನಲ್ಲಿದ್ದರಿಂದ ಬಸ್ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ವೀಲ್ ಆ್ಯಕ್ಸೆಲ್ ಕಟ್ ಆಗಿದ್ದು, ಕಂಡಕ್ಟರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳುಗಳಿಬ್ಬರ ಸ್ಥಿತಿ ಗಂಭೀರವಾಗಿದ್ದು, ಗುಂಡ್ಲುಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಯಾಣಿಕರಲ್ಲಿ ಬೆಂಗಳೂರು ಮೂಲದವರಿದ್ದು, ಅವರನ್ನು ಬೆಂಗಳೂರಿಗೆ ರವಾನಿಸಿದ್ದಾರೆ. ಈ ಘಟನೆ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Sign in to your account
Username or Email Address


Password

 Remember Me


