ಕಾರವಾರ: ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ.ಸದಾಶಿವಗಡದ ನಿವಾಸಿ ಶಾನ್ ಗುಡೀನಾ (23) ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 66 ರ ಸದಾಶಿವಗಡದಲ್ಲಿ ಇಂದು ಮಧ್ಯಾಹ್ನ ಸುಮಾರು 12.30 ಗಂಟೆಗೆ ಈ ಅಪಘಾತ ಸಂಭವಿಸಿದೆ. ಶಾನ್ ಗುಡೀನಾ ಗೋವಾ ದಿಂದ ಕಾರವಾರಕ್ಕೆ ತನ್ನ ಕೆಟಿಎಂ ಬೈಕಿನಲ್ಲಿ ಬರುತ್ತಿದ್ದರು. ಶಾನ್ ಬೈಕನ್ನು ಅತೀ ವೇಗದಿಂದ ಓಡಿಸುತ್ತಿದ್ದನು. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ವಾಹನವನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ವೇಗವಾಗಿ ಡಿವೈಡರ್ ಗೆ ಹೋಗಿ ಡಿಕ್ಕಿ ಹೊಡೆದಿದ್ದಾನೆ.ಶಾನ್ ಹೆಲ್ಮೆಟ್ ಧರಿಸಿರಲಿಲ್ಲ. ಆದ್ದರಿಂದ ಡಿಕ್ಕಿ ಹೊಡೆದ ರಭಸಕ್ಕೆ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು, ಶಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸಂಬಂಧ ಕಾರವಾರ ತಾಲೂಕಿನ ಚಿತ್ತಾಕುಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


