ದಾವಣಗೆರೆ: ಟ್ಯಾಂಕರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಸ್ಥಳದಲ್ಲಿ ಸಾವನ್ನಪ್ಪಿ, ಮತ್ತೊಬ್ಬನಿಗೆ ಗಂಭೀರ ಗಾಯವಾದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಳ್ಳಿ ತಾಲೂಕು ಟಿ.ಬಿ ಸರ್ಕಲ್ ಬಳಿ ನಡೆದಿದೆ.ಆದರ್ಶ್ (24) ಹಾಗೂ ಗಿರೀಶ್ (26) ಸಾವನ್ನಪ್ಪಿದ ದುರ್ದೈವಿಗಳಾಗಿದ್ದು, ಇನ್ನೊಬ್ಬ ಪ್ರದೀಪ್ (25) ನಿಗೆ ಗಂಭೀರ ಗಾಯವಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಗೋವಿನ ಕೋವಿ ಗ್ರಾಮದ ನಿವಾಸಿಗಳಾಗಿದ್ದು, ಕಳೆದ ರಾತ್ರಿ ಹೊನ್ನಾಳಿಯಲ್ಲಿ ನಡೆದ ಸಂಗೋಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುವಾಗ ಈ ಅಪಘಾತ ಸಂಭವಿಸಿದೆ.ಸ್ಥಳಕ್ಕೆ ಹೊನ್ನಾಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.Sign in to your account
Username or Email Address


Password

 Remember Me


